Connect with us

Corona

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 68 ಲಕ್ಷಕ್ಕೆ ಏರಿಕೆ

Published

on

-ಸಕ್ರಿಯ ಪ್ರಕರಣಗಳ ಸಂಖ್ಯೆ 9,02,425

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 68,35,656 ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 78,524 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ನಿನ್ನೆ ಒಂದೇ ದಿನ ಕೊರೊನಾಗೆ 971 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.

ದೇಶದಲ್ಲಿ ಸದ್ಯ 9,02,425 ಸಕ್ರಿಯ ಪ್ರಕರಣಗಳಿದ್ದು, 1,05,526 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ 11,94,321 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ. ಅಕ್ಟೋಬರ್ 7ರವರೆಗೆ 8,34,65,975 ಸ್ಯಾಂಪಲ್ ಗಳನ್ನು ಟೆಸ್ಟ್ ಮಾಡಲಾಗಿದೆ. ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರ (14,578), ಕರ್ನಾಟಕ (10,947) ಮತ್ತು ಕೇರಳ (10,606) ಕೊರೊನಾ ಪ್ರಕರಣಗಳು ವರದಿಯಾಗಿವೆ.

ಕರ್ನಾಟಕದಲ್ಲಿ 10,947 ಮಂದಿಗೆ ಸೋಂಕು ಬಂದಿದ್ದು, ಆಸ್ಪತ್ರೆಯಿಂದ 9,832 ಮಂದಿ ಬಿಡುಗಡೆಯಾಗಿದ್ದಾರೆ. 113 ಮಂದಿ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 6,68,652ಕ್ಕೆ ಏರಿಕೆಯಾಗಿದೆ. ಈ ಪೈಕಿ 5,42,906 ಮಂದಿ ಬಿಡುಗಡೆಯಾಗಿದ್ದರೆ 1,16,153 ಸಕ್ರೀಯ ಪ್ರಕರಣಗಳಿವೆ. ಒಟ್ಟು 9,574 ಮಂದಿ ಕೊರೊನಾಗೆ ಬಲಿಯಾಗಿದ್ದು, 841 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

Click to comment

Leave a Reply

Your email address will not be published. Required fields are marked *