ಬೆಂಗಳೂರು: ರಾಜ್ಯದಲ್ಲಿ ಇಂದು 188 ಒಟ್ಟು ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 2 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 95 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 148 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, ಇಂದು ಕೊರೊನಾದಿಂದ ಯಾರು ಮರಣ ಹೊಂದಿಲ್ಲ.
Advertisement
ರಾಜ್ಯದಲ್ಲಿ 318 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,512 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,88,521 ಮಂದಿಗೆ ಕೊರೊನಾ ಬಂದಿದೆ. 29,41,896 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.06 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.06 ರಷ್ಟಿದೆ.
Advertisement
Advertisement
ಇಂದು ರಾಜ್ಯದಲ್ಲಿ ಒಟ್ಟು 28,115 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 73,924 ಸ್ಯಾಂಪಲ್ ( RTPCR 64,418 + 9,506 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, 11 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇನ್ಸ್ಟಾದಿಂದ ಮದುವೆ ಫೋಟೋ ಡಿಲೀಟ್ ಮಾಡಿದ ಸಮಂತಾ
Advertisement
ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 95, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 2, ಚಿತ್ರದುರ್ಗ 4, ದಕ್ಷಿಣ ಕನ್ನಡ 12, ದಾವಣಗೆರೆ 1, ಧಾರವಾಡ 0, ಗದಗ 0, ಹಾಸನ 11, ಹಾವೇರಿ 0, ಕಲಬುರಗಿ 2, ಕೊಡಗು 10, ಕೋಲಾರ 1, ಕೊಪ್ಪಳ 0, ಮಂಡ್ಯ 4, ಮೈಸೂರು 16, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 5, ಉಡುಪಿ 6, ಉತ್ತರ ಕನ್ನಡ 7, ವಿಜಯಪುರ 1, ಮತ್ತು ಯಾದಗಿರಿಯಲ್ಲಿ ಇಂದು ಕೂಡ ಶೂನ್ಯ ಪ್ರಕರಣ ದಾಖಲಾಗಿದೆ.