ಬೀಜಿಂಗ್: ಕೊರೊನಾ ವಿಚಾರದಲ್ಲಿ ಸತ್ಯವನ್ನು ಮುಚ್ಚಿಟ್ಟು ಸುಳ್ಳುಗಳ ಕಥೆಯನ್ನು ಸೃಷ್ಟಿಸುತ್ತಿರುವ ಚೀನಾದ ಒಂದೊಂದೆ ಕೃತ್ಯಗಳು ಬಯಲಾಗುತ್ತಿದ್ದು, 2 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಪತ್ರಕರ್ತ ಈಗ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ಕೋವಿಡ್-19 ಜನ್ಮಸ್ಥಳವಾದ ವುಹಾನ್ ನಗರದಲ್ಲಿ ಜೆಹುವಾ ಸಿಟಿಜನ್ ಜರ್ನಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಈ ವೇಳೆ ಕೊರೊನಾ ವೈರಸ್ ಸಂಬಂಧಿಸಿದಂತೆ ವುಹಾನ್ ನಗರದಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ಯೂಟ್ಯೂಬ್, ಟ್ವಿಟ್ಟರ್ ನಲ್ಲಿ ಪ್ರಕಟಿಸುತ್ತಿದ್ದರು.
Advertisement
Advertisement
ಫೆ.25 ರಂದು ಬಿಳಿಬಣ್ಣದ ಎಸ್‍ಯುವಿ ಕಾರಿನಲ್ಲಿ ವುಹಾನ್ ನಗರದಲ್ಲಿ ಸಂಚರಿಸುತ್ತಿದ್ದಾಗ ಕಂಡು ಬಂದ ದೃಶ್ಯಗಳನ್ನು ಸೆರೆಹಿಡಿದು ವಿಡಿಯೋ ಅಪ್ಲೋಡ್ ಮಾಡಿದ್ದರು. ಇದನ್ನೂ ಓದಿ: ಚೀನಾ ಸರ್ಕಾರವನ್ನು ಟೀಕಿಸಿದ್ದ ಜನಪ್ರಿಯ ಉದ್ಯಮಿ ಕಣ್ಮರೆ
Advertisement
ಈ ವಿಡಿಯೋ ಅಪ್ಲೋಡ್ ಆದ ಬೆನ್ನಲ್ಲೇ ಜೆಹುವಾ ಅಪಾರ್ಟ್ ಮೆಂಟ್ ನಲ್ಲಿರುವ ಮನೆಗೆ ಬಂದಾಗ ಸಮವಸ್ತ್ರ ಧರಿಸಿದ್ದ ಪೊಲೀಸರು ಆಗಮಿಸಿದ್ದಾರೆ. ನಾವು ಸ್ಥಳೀಯ ಪೊಲೀಸರು ಎಂದು ಪರಿಚಯ ಮಾಡಿಕೊಂಡ ಅವರು ಸಾರ್ವಜನಿಕ ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಿಮ್ಮ ಬಗ್ಗೆ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.
Advertisement
武昌站地庫潛入:外來務工的滯留者還在不在?(Plus:流落街頭的他與它)COVID 19: What’s happened to Wuchang… https://t.co/ysKVUbILJk via @YouTube
— Kcriss Li (@KcrissLi) February 24, 2020
ಇದಾದ ಬಳಿಕ ಪೊಲೀಸರು ನಿಮ್ಮ ವಿರುದ್ಧ ಯಾವುದೇ ಕೇಸ್ ದಾಖಲಿಸುವುದಿಲ್ಲ. ಆದರೆ ಸೂಕ್ಷ್ಮ ಪ್ರದೇಶದಲ್ಲಿ ಸಂಚರಿಸಿದ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ ಎಂದು ಹೇಳಿ ಅವರನ್ನು ಕೆಲ ದಿನ ವುಹಾನ್ ನಲ್ಲಿ ಇರಿಸಿ ಬಳಿಕ ಬೇರೆ ಕಡೆ ಕ್ವಾರಂಟೈನ್ ನಲ್ಲಿ ಇಡಲಾಗಿತ್ತು.
ಫೆ.25 ರಂದು ಕೊನೆಯಾದಾಗಿ ವಿಡಿಯೋ ಅಪ್ಲೋಡ್ ಮಾಡಿದ್ದ ಜೆಹುವಾ ಬುಧವಾರ ಮತ್ತೊಂದು ವಿಡಿಯೋ ಅಪ್ಲೋಡ್ ಮಾಡಿ ನಡೆದ ಘಟನೆಯನ್ನು ವಿವರಿಸಿದ್ದಾರೆ. ಈ ವಿಡಿಯೋದಲ್ಲಿ ನಾನು ಕಣ್ಣು ಮತ್ತು ಕಿವಿಯನ್ನು ಮುಚ್ಚಿ ಮೌನವಾಗಿ ಇರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಳಕಿಗೆ ಬಂತು ಮತ್ತೊಂದು ಚೀನಾದ ಮಹಾ ಎಡವಟ್ಟು
我是李泽华Kcriss,这是2月26日至今关于我的一些情况。I'm Kcriss, here is something about me si… https://t.co/ETjY7QaacY via @YouTube
— Kcriss Li (@KcrissLi) April 22, 2020
ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಇರುವಷ್ಟು ಮಾಧ್ಯಮ ಸ್ವಾತಂತ್ರ್ಯ ಕಮ್ಯೂನಿಸ್ಟ್ ಚೀನಾದಲ್ಲಿ ಇಲ್ಲ. ಆರಂಭದಲ್ಲೇ ಚೀನಾದ ವೈದ್ಯ ಲಿ ವೆನ್ಲಿಯಾಂಗ್ ಈ ವೈರಸ್ ರೋಗದ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ಸಾರ್ಸ್ ರೀತಿಯ ಹೊಸ ರೋಗ ಲಕ್ಷಣ ಹೊಂದಿರುವ 7 ಮಂದಿ ರೋಗಿಗಳನ್ನು ನಾನು ಗುರುತಿಸಿದ್ದೇನೆ. ಹೀಗಾಗಿ ಸುರಕ್ಷಾ ಸಾಧನಗಳನ್ನು ಬಳಸಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಈ ಜಾಗೃತಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಜನವರಿ 1 ರಂದು ಡಾ. ಲಿ ವೆನ್ಲಿಯಾಂಗ್ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಖಂಡಿಸಲಾಗಿತ್ತು. ವುಹಾನ್ ಮುನ್ಸಿಪಾಲ್ ಆರೋಗ್ಯ ಆಯೋಗ ಪ್ರಾಥಮಿಕ ತನಿಖೆಯಲ್ಲಿ ಮನುಷ್ಯರಿಂದ ಮನುಷ್ಯರಿಗೆ ಹರಡುವ ಬಗ್ಗೆ ಯಾವುದೇ ಪುರಾವೆಗಳು ಸಿಕ್ಕಿಲ್ಲ ಎಂದು ಹೇಳಿತ್ತು.
ಚೀನಾದ ಹೇಳಿಕೆಯನ್ನು ಜನವರಿ 14ರಂದು ವಿಶ್ವ ಆರೋಗ್ಯ ಸಂಸ್ಥೆ ಕೂಡಾ ಸಮರ್ಥಿಸಿಕೊಂಡು ಪ್ರಾಥಮಿಕ ತನಿಖೆಯಲ್ಲಿ ಈ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತಿರುವ ಬಗ್ಗೆ ಯಾವುದೇ ದಾಖಲೆ ಸಿಕ್ಕಿಲ್ಲ ಎಂದು ಟ್ವೀಟ್ ಮಾಡಿತ್ತು. ಇದಾದ ಬಳಿಕ ಫೆ.6 ರಂದು ಕೊರೊನಾ ವೈರಸ್ ಬಗ್ಗೆ ಮೊದಲ ಬಾರಿಗೆ ಎಚ್ಚರಿಕೆ ನೀಡಿದ್ದ ವೈದ್ಯ ಲಿ ವೆನ್ಲಿಯಾಂಗ್ ಮೃತಪಟ್ಟಿದ್ದರು.