ಬೆಂಗಳೂರು: ಇಂದು ಮೂವರ ಫಲಿತಾಂಶ ಪಾಸಿಟಿವ್ ಬಂದಿದ್ದು, ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಕೊರೊನಾ ಖಚಿತ ಪಟ್ಟ ಒಟ್ಟು 13 ಮಂದಿಯ ಆರೋಗ್ಯ ಸ್ಥಿರವಾಗಿದೆ ಆಸ್ಪತ್ರೆಯಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.
Advertisement
ರೋಗಿ 12: 25 ವರ್ಷದ ಬೆಂಗಳೂರಿನ ಪುರುಷ ರೋಗಿ ಮಾರ್ಚ್ 13 ರಂದು ಸ್ಪೇನ್ ಮಾಡ್ರಿಡ್‍ನಿಂದ ಆಗಮಿಸಿದ್ದರು. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 7 ಜನರನ್ನು ಪತ್ತೆ ಮಾಡಲಾಗಿದ್ದು, ಅವರಿಗೆ ಯಾವುದೇ ಲಕ್ಷಣ ಕಂಡು ಬಂದಿಲ್ಲ ಮನೆಯಲ್ಲೇ ಪ್ರತ್ಯೇಕವಾಗಿರುವಂತೆ ಸೂಚಿಸಲಾಗಿದೆ.
Advertisement
Advertisement
ರೋಗಿ 13: 56 ವರ್ಷದ ಬೆಂಗಳೂರಿನ ಮಹಿಳಾ ರೋಗಿ ಅಮೇರಿಕದಿಂದ ಮಾರ್ಚ್ 6 ರಂದು ಆಗಮಿಸಿದ್ದರು. 50 ಮಂದಿ ಇವರ ಸಂಪರ್ಕಕ್ಕೆ ಬಂದಿದ್ದು ಅವರನ್ನು ಕಡ್ಡಾಯವಾಗಿ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ.
Advertisement
ರೋಗಿ 15: 35 ವರ್ಷದ ಬೆಂಗಳೂರಿನ ಪುರುಷ ರೋಗಿ ಅಮೇರಿಕದಿಂದ ಮಾರ್ಚ್ 16 ರಂದು ಬೆಂಗಳೂರಿಗೆ ಬಂದಿದ್ದಾರೆ. ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರನ್ನು ಪತ್ತೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ.
ಒಟ್ಟು ಇಂದು 37 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 25, ಉತ್ತರ ಕನ್ನಡ ಮತ್ತು ಕಲಬುರಗಿಯಲ್ಲಿ 3, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ 2, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ತಲಾ ಒಬ್ಬೊಬ್ಬರು ದಾಖಲಾಗಿದ್ದಾರೆ. ಒಟ್ಟು ರಾಜ್ಯದಲ್ಲಿ 80 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ.
ಮಂಗಳವಾರವರೆಗೆ ಕರ್ನಾಟಕದಲ್ಲಿ 1,19,814 ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ. ಬೆಂಗಳೂರು ವಿಮಾನನಿಲ್ದಾಣಲ್ಲಿ ನಿನ್ನೆ 1,876(ಒಟ್ಟು 84,152), ಮಂಗಳೂರು ವಿಮಾನ ನಿಲ್ದಾಣದಲ್ಲಿ 563(ಒಟ್ಟು 30,040) ಮಂದಿಯನ್ನು ತಪಾಸಣೆ ಮಾಡಲಾಗಿದೆ. ಮಂಗಳೂರು ಮತ್ತು ಕಾರವಾರ ಬಂದರುಗಳಲ್ಲಿ ಒಟ್ಟು 5,622 ಮಂದಿಯನ್ನು ತಪಾಸಣೆ ಮಾಡಲಾಗಿದೆ.
14 ಕೊರೊನಾ ಪೀಡಿತರ ಪೈಕಿ ಈಗಾಗಲೇ ಮೊದಲ ರೋಗಿಯಾಗಿ ದಾಖಲಾಗಿದ್ದ ಟೆಕ್ಕಿ, ಟೆಕ್ಕಿಯ ಪತ್ನಿ, ಮಗಳು ಗುಣಮುಖರಾಗಿದ್ದಾರೆ. ಕಲಬುರಗಿಯ ವ್ಯಕ್ತಿ ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು ರಾಜ್ಯದಲ್ಲಿ 10 ಮಂದಿ ಕೊರೊನಾ ಪೀಡಿತರಿದ್ದು ಬೆಂಗಳೂರಿನಲ್ಲಿ 8 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರೆ ಕಲಬುರಗಿಯಲ್ಲಿ ಇಬ್ಬರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
10 ಮಂದಿ ಯಾರೆಲ್ಲ?
1. ಮೈಂಡ್ ಟ್ರೀ ಕಂಪನಿಯ ಟೆಕ್ಕಿ
2. ಗೂಗಲ್ ಕಂಪನಿಯ ಟೆಕ್ಕಿ
3. ಕೊರೊನಾದಿಂದ ಮೃತಪಟ್ಟ ಕಲಬುರಗಿ ವ್ಯಕ್ತಿಯ ಮಗಳು
4. ಮೈಂಡ್ ಟ್ರೀ ಕಂಪನಿಯ ಟೆಕ್ಕಿ ಜೊತೆ ಪ್ರಯಾಣಿಸಿದ ಸಹೋದ್ಯೋಗಿ
5. ಯುಕೆ ಪ್ರವಾಸದಿಂದ ಹಿಂದಿರುಗಿದ ವಿದ್ಯಾರ್ಥಿನಿ
6. ಕೊರೊನಾದಿಂದ ಮೃತಪಟ್ಟ ಕಲಬುರಗಿ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ವೈದ್ಯ
7. ದುಬೈನಿಂದ ಮರಳಿದ್ದ 67 ವರ್ಷದ ಮಹಿಳೆ
8. ಅಮೆರಿಕದಿಂದ ಮರಳಿದ್ದ 56 ವರ್ಷದ ವ್ಯಕ್ತಿ
9. ಸ್ಪೇನ್ ದೇಶದಿಂದ ಮರಳಿದ್ದ 25 ವರ್ಷದ ಮಹಿಳೆ
10. ಅಮೆರಿಕದಿಂದ ಬಂದ 35 ವರ್ಷದ ವ್ಯಕ್ತಿ