ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಫಿಸಿಯೋ ಮತ್ತು ಪ್ರಸ್ತುತ ದೆಹಲಿ ಕ್ಯಾಪಿಟಲ್ಸ್‌ನ ಪ್ಯಾಟ್ರಿಕ್ ಫರ್ಹಾರ್ಟ್ ಅವರಿಗೆ ಕೋವಿಡ್ ದೃಢಪಟ್ಟಿದೆ.
ಕ್ವಾರಂಟೈನ್‍ನಲ್ಲಿರುವ ಪ್ಯಾಟ್ರಿಕ್ ಫರ್ಹಾರ್ಟ್ ಅವರನ್ನು ಡಿಸಿ ವೈದ್ಯಕೀಯ ತಂಡವು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಕೋವಿಡ್ ಪ್ರಕರಣಗಳು ಕ್ರಮೇಣ ಹೆಚ್ಚಾಗುವ ಪರಿಣಾಮ ಎಲ್ಲಿ ಎರಡು ತಿಂಗಳ ಅವಧಿಯ ಐಪಿಎಲ್ 2022ಕ್ಕೂ ಕೋವಿಡ್‍ನ ಬಿರುಗಾಳಿ ಅಪ್ಪಳಿಸುತ್ತೋ ಎಂಬ ಭಯ ಕಾಡುತ್ತಿದೆ. ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಸ್ಟ್ರಾಂಗ್ ಕಮ್‍ಬ್ಯಾಕ್ – ಐಪಿಎಲ್‍ನಲ್ಲಿ ಬುಲೆಟ್ ಥ್ರೋ, ವಿಕೆಟ್ ಕಟ್
Advertisement
Advertisement
ಕಳೆದ ವರ್ಷ, ಮೇ ತಿಂಗಳಲ್ಲಿ ಕೊರೊನಾದಿಂದಾಗಿ ಐಪಿಎಲ್ 14ನೇ ಆವೃತ್ತಿಯ ಮೊದಲಾರ್ಧವನ್ನು ಸ್ಥಗಿತಗೊಳಿಸಿ ನಂತರ ಉಳಿದ ಪಂದ್ಯಗಳನ್ನು ಯುಎಇಯಲ್ಲಿ ಆಯೋಜಿಸಲಾಗಿತ್ತು. ಇದನ್ನೂ ಓದಿ: ಸಚಿನ್ ತೆಂಡೂಲ್ಕರ್ ಕಾಲಿಗೆ ನಮಸ್ಕರಿಸಿದ ಜಾಂಟಿ ರೋಡ್ಸ್
Advertisement
Advertisement
ಈ ಬಾರಿಯ ಐಪಿಎಲ್ ಸರಣಿಯನ್ನು ಮಹಾರಾಷ್ಟ್ರದ ನಾಲ್ಕು ಕ್ರೀಡಾಂಗಣಗಳಲ್ಲಿ ನಡೆಸಲಾಗುತ್ತಿದೆ. ಮುಂಬೈ, ನವಿ ಮುಂಬೈ ಮತ್ತು ಪುಣೆಯಲ್ಲಿರುವ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.