ಬೆಂಗಳೂರು: ಕೋವಿಡ್ ನಿಯಂತ್ರಿಸಲು ಹೇರಿದ್ದ ವೀಕೆಂಡ್ ಕರ್ಫ್ಯೂ ಅನ್ನು ಕರ್ನಾಟಕ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಎರಡೇ ವಾರಕ್ಕೆ ವೀಕೆಂಡ್ ಕರ್ಫ್ಯೂ ಅಂತ್ಯಗೊಂಡಿದೆ.
ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು, ತಜ್ಞರ ಜೊತೆಗಿನ ಸಭೆಯ ಬಳಿಕ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಎರಡು ವಾರದಿಂದ ಜಾರಿಯಾಗಿದ್ದ ವೀಕೆಂಡ್ ಕರ್ಫ್ಯೂ ನಾಳೆ ಇರುವುದಿಲ್ಲ. ಆದರೆ ನೈಟ್ ಕರ್ಫ್ಯೂ ರಾತ್ರಿ 10 ರಿಂದ ಮುಂದುವರಿಯಲಿದೆ. ಸಭೆಯ ಬಳಿಕ ಸಚಿವ ಅಶೋಕ್ ಸುದ್ದಿಗೋಷ್ಠಿ ನಡೆಸಿ ವೀಕೆಂಡ್ ವೀಕೆಂಡ್ ಕರ್ಫ್ಯೂ ತೆರವುಗೊಳಿಸಿದ್ದೇವೆ ಎಂದು ತಿಳಿಸಿದರು.
Advertisement
Advertisement
ಯೂರೋಪ್ ರಾಷ್ಟ್ರಗಳಲ್ಲಿ ಯಾವುದೇ ನಿರ್ಬಂಧಗಳಿಲ್ಲ. ಕೋವಿಡ್ ಮೂರನೇ ಅಲೆಯ ವ್ಯಾಪಕವಾಗಿ ಹರಡಿದರೂ ತೀವ್ರತೆ ಕಡಿಮೆ ಇದೆ. ಈ ಕಾರಣಕ್ಕೆ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಒಂದು ವೇಳೆ ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಾದರೆ ಮತ್ತೆ ಬಿಗಿಕ್ರಮ ಮುಂದುವರಿಸಬಹುದು. ಹೀಗಾಗಿ ವೀಕೆಂಡ್ ಕರ್ಫ್ಯೂ ತೆರವು ಮಾಡುವುದು ಉತ್ತಮ ಎಂದು ಕೆಲ ಸಚಿವರು ಸಲಹೆ ನೀಡಿದ್ದಾರೆ. ಸಚಿವರ ಸಲಹೆ ಸಿಎಂ ಬೊಮ್ಮಾಯಿ ಸಹಮತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶೀಘ್ರವೇ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ ಪುನೀತ್ ನಿರ್ಮಾಣದ 3 ಸಿನಿಮಾಗಳು
Advertisement
Advertisement
ಆಸ್ಪತ್ರೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ಐಸಿಯು, ವೆಂಟಿಲೇಟರ್ ನಲ್ಲಿ ರೋಗಿಗಳು ಇಲ್ಲ. ವೀಕೆಂಡ್ ಕರ್ಫ್ಯೂಗೆ ಜನರ ಆಕ್ರೋಶ ಇದೆ. ಹೀಗಾಗಿ ವೀಕೆಂಡ್ ಕರ್ಫ್ಯೂ ರದ್ದು ಮಾಡುವುದು ಉತ್ತಮ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ ವೀಕೆಂಡ್ ಕರ್ಫ್ಯೂ ಬದಲಿಗೆ ಟಫ್ ರೂಲ್ಸ್ ಜಾರಿಗೆ ಸಿಎಂ ಒಲವು ತೋರಿದ್ದಾರೆ. ಇದನ್ನೂ ಓದಿ: ರಾಜಕಾರಣದ ಆಸೆ ಇಟ್ಟುಕೊಂಡಿಲ್ಲ: ನಿವೃತ್ತಿ ಸುಳಿವು ನೀಡಿದ್ರಾ ಅನಂತಕುಮಾರ್ ಹೆಗಡೆ?
ವೀಕೆಂಡ್ ಕರ್ಫ್ಯೂ ಜಾರಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಸಿಟಿ ರವಿ ಸೇರಿದಂತೆ ಬಿಜೆಪಿ ನಾಯಕರಿಂದಲೇ ಟೀಕೆ ವ್ಯಕ್ತವಾಗಿತ್ತು.