ಬೆಂಗಳೂರು: ಕೊರೊನಾ, ಒಮಿಕ್ರಾನ್ ಸೋಂಕು ಹಿನ್ನೆಲೆಯಲ್ಲಿ ಸಿನಿಮಾ ಥಿಯೇಟರ್ ಮೇಲೆ ಹೇರಲಾಗಿದ್ದ ನಿಯಮವನ್ನು ಸಡಿಲ ಗೊಳಿಸಿದ್ದು, ನಾಳೆಯಿಂದ ಥಿಯೇಟರ್ ಹೌಸ್ ಫುಲ್‌ಗೆ ಸರ್ಕಾರ
ಅನುಮತಿ ನೀಡಿದೆ.
ಸಿಎಂ ನೇತೃತ್ವದಲ್ಲಿ ಕೋವಿಡ್ ಸಂಬಂಧಿತ ಸಭೆ ನಡೆಸಿದ್ದಾರೆ. ಚಲನಚಿತ್ರ ಮಂದಿರದೊಳಗೆ ಹೋಗುವವರು ಕಡ್ಡಾಯ ಮಾಸ್ಕ್ ಧರಿಸಬೇಕು, ಎರಡು ಡೋಸ್ ಲಸಿಕೆ ಕಡ್ಡಾಯವಾಗಿರುತ್ತದೆ. ತಿಂಡಿ ಪದಾರ್ಥಗಳನ್ನ ಥಿಯೇಟರ್ ಒಳಗೆ ತೆಗೆದುಕೊಂಡು ಹೋಗಲು ನಿಷೇಧ ಹೇರಲಾಗಿದೆ. ವಿರಾಮದ ಸಂದರ್ಭದಲ್ಲಿ ಹೊರಗೆ ಬಂದು ತಿನ್ನಬಹುದು. ಕಟ್ಟುನಿಟ್ಟಿನ ಪರಿಶೀಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಓವೈಸಿಗೆ ಝಡ್ ಮಾದರಿಯ ಭದ್ರತೆ ನೀಡಿದ ಕೇಂದ್ರ ಸರ್ಕಾರ
ಆರೋಗ್ಯ ಸಚಿವ ಕೆ. ಸುಧಾಕರ್ ಮಾಧ್ಯಮದವರೊಂದಿಗೆ ಮಾತನಾಡಿ, ಡಿಸೆಂಬರ್ ಕೊನೆ ವಾರದಲ್ಲಿ ಓಮೈಕ್ರಾನ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಕೆಲ ಕ್ರಮ ತೆಗೆದುಕೊಂಡಿದ್ದೇವೆ. ನೈಟ್ ಕರ್ಫ್ಯೂ, ವೀಕೆಂಡ್ ಸೇರಿದಂತೆ ಹಲವು ನಿಯಮಗಳನ್ನು ಹಿಂದೆ ತೆಗೆದುಕೊಂಡಿದ್ದೇವು. ಇವತ್ತು ಆಸ್ಪತ್ರೆ ದಾಖಲಾತಿ 5%ನಿಂದ 2%ಗೆ ಇಳಿದಿದೆ. ನಾಳೆಯಿಂದ ಚಲನ ಚಿತ್ರಮಂದಿರಗಳಿಗೆ ರಿಲ್ಯಾಕ್ಸ್ 100% ವಿನಾಯ್ತಿ ಥಿಯೇಟರ್‍ಗಳಿಗಿದ್ದು, 50% ನಿಯಮ ಸಡಿಲಿಕೆ, ಜಿಮ್, ಈಜುಕೊಳ, ಯೋಗ ಕೇಂದ್ರಗಳಿಗೂ 100% ಭರ್ತೀಗೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.