ಬೆಂಗಳೂರು: ಲಾಕ್‍ಡೌನ್3 ಘೋಷಣೆಯಾಗಿರುವುರಿಂದ ವಿವಿಧ ಸ್ಥಳಗಳಲ್ಲಿ ಸಿಕ್ಕಿಹಾಕಿಕೊಂಡು ಊರಿಗೆ ಹೋಗಲು ಪರದಾಡುತ್ತಿರುವ ಕಾರ್ಮಿಕರು, ಯಾತ್ರಿಕರು, ವಿದ್ಯಾರ್ಥಿಗಳು ಮತ್ತಿತರರಿಗೆ ಅನುಕೂಲವಾಗುವಂತೆ ಒಂದು ದಿನ ಅಥವಾ ಒಂದು ಕಡೆಗೆ ಹೋಗಲು ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಒಂದು ದಿನ, ಒಂದು ಕಡೆಗೆ ಹೋಗಲು ಮಾತ್ರ ಈ ಪಾಸ್ ಬಳಸಬಹುದು. ಅಂತರ್ ಜಿಲ್ಲೆಗಳಿಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ತಮ್ಮ ಆದೇಶದಲ್ಲಿ ಪ್ರಕಟಿಸಿದ್ದಾರೆ.
Advertisement
Advertisement
ಪಾಸ್ ಬೇಕಾದವರು ತಮ್ಮ ದಾಖಲೆಗಳನ್ನು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅಥವಾ ಕಮಿಷನರೇಟ್‍ಗಳಲ್ಲಿ ಉಪ ಪೊಲೀಸ್ ಕಮಿಷನರ್ ಗೆ ಪಾಸ್‍ಗಳನ್ನು ವಿತರಿಸಲು ಅಧಿಕಾರ ನೀಡಲಾಗಿದೆ.
Advertisement
ಊರುಗಳಿಗೆ ಹಿಂತಿರುಗುವ ಜನರ ಪ್ರಯಾಣದ ಸಮಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶ, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
Advertisement
ಪಾಸ್ ಪಡೆದವರು ಪ್ರಯಾಣಿಸುವ ಜಿಲ್ಲೆಗಳಲ್ಲಿ ಅಧಿಕಾರಿಗಳು ಆರೋಗ್ಯ ತಪಾಸಣೆ ನಡೆಸಬೇಕು. ಒಂದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದರೆ ಕೂಡಲೇ ಅವರನ್ನು ಕೋವಿಡ್ ಆಸ್ಪತ್ರೆಗೆ ಕಳುಹಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಲಾಕ್ ಡೌನ್ ನಿಂದ ಒಂದೆಡೆ ಸಿಲುಕಿರುವ ವಲಸೆ ಕಾರ್ಮಿಕರು,ಯಾತ್ರಾರ್ಥಿಗಳು, ಪ್ರವಾಸಿಗರು,ವಿದ್ಯಾರ್ಥಿಗಳು ಮತ್ತೊಂದು ಕಡೆ ತೆರಳಲು ಒಂದು ದಿನಕ್ಕೆ,ಒಂದು ಬಾರಿಗೆ ಪ್ರಯಾಣಿಸಲು ಪಾಸ್ ಗಳನ್ನು ಸಂಬಂಧಿತ ಜಿಲ್ಲಾಧಿಕಾರಿಗಳು/ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನೀಡಲಿದ್ದಾರೆ.ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ.#KarnatakaFightsCorona pic.twitter.com/enfvCaUp3U
— DIPR Karnataka (@KarnatakaVarthe) May 2, 2020