ಜಿನೇವಾ: ವಿಶ್ವದಲ್ಲಿ ಕೊರೊನಾ (Corona) ಸೋಂಕಿತರ ಸಂಖ್ಯೆ ಇಳಿಕೆ ಕಂಡರೂ, ಪ್ರತಿ 44 ಸೆಕೆಂಡ್‍ಗೆ ಒಬ್ಬರಂತೆ ಈಗಲೂ ಸಾವನ್ನಪ್ಪುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಕಳವಳ ವ್ಯಕ್ತಪಡಿಸಿದೆ.
Advertisement
ಕೊರೊನಾ ಕುರಿತಾಗಿ ಮಾಹಿತಿ ಹಂಚಿಕೊಂಡಿರುವ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ (Director General WHO) ಟೆಡ್ರೊಸ್ ಅಧಾನೊಮ್ ಫೆಬ್ರೆಯೆಸಸ್ (Tedros Adhanom Ghebreyesus), ವಿಶ್ವದಾದ್ಯಂತ ಕೊರೊನಾ ಕೇಸ್‍ಗಳ ಸಂಖ್ಯೆ ಇಳಿಕೆ ಕಂಡಿದೆ. ಸೋಂಕಿನ ಜೊತೆಗೆ ಮರಣ ಪ್ರಮಾಣ ಕೂಡ ಗಣನೀಯ ಇಳಿಕೆ ಕಂಡಿದೆ. ಕಳೆದ ಒಂದು ವಾರದ ಅಂಕಿ ಅಂಶಗಳನ್ನು ಗಮನಿಸಿದ ಬಳಿಕ ಕೊರೊನಾದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಶೇ.80ರಷ್ಟು ಇಳಿಕೆ ಕಂಡಿದೆ. ಆದರೂ ಪ್ರತಿ 44 ಸೆಕೆಂಡ್‍ಗೆ ಒಬ್ಬರಂತೆ ಈಗಲೂ ಸಾವನ್ನಪ್ಪುತ್ತಿದ್ದಾರೆ ಎಂದರು. ಇದನ್ನೂ ಓದಿ: ಪಾಕ್‌ನಲ್ಲಿ ಭೀಕರ ಪ್ರವಾಹ – ಸಂತ್ರಸ್ತರಿಗೆ ದೇವಾಲಯದಲ್ಲಿ ಆಶ್ರಯ ನೀಡಿದ ಹಿಂದೂ ಸಮುದಾಯ
Advertisement
Advertisement
ಕೊರೊನಾ ವಿರುದ್ಧದ ಹೋರಾಟ ಮುಗಿದಿಲ್ಲ. ಸೋಂಕಿನ ಪ್ರಭಾವ ದುರ್ಬಲಗೊಂಡಿದೆ ಅಷ್ಟೇ. ಸಾವಿನ ಪ್ರಕರಣಗಳನ್ನು ತಡೆಗಟ್ಟಲು ಪ್ರಯತ್ನಿಸಿ. ಜನಸಾಮಾನ್ಯರು ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ ಎಂದು ಎಚ್ಚರಿಕೆ ನೀಡಿದರು.
Advertisement
ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 5,076 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು 47,945 ಸಕ್ರಿಯ ಪ್ರಕರಣ ದೇಶದಲ್ಲಿದೆ. ಇದನ್ನೂ ಓದಿ: ನಮಗೆ ಸವಾಲು ಹಾಕುವ ಧಮ್ ನಿಮಗೆ ಇಲ್ಲ: ಬೊಮ್ಮಾಯಿ ವಿರುದ್ಧ ಸಿದ್ದು ಕಿಡಿ
ಕೊರೊನಾದೊಂದಿಗೆ ಕಾಡುತ್ತಿರುವ ಮಂಕಿಪಾಕ್ಸ್ (Monkeypox) ಪ್ರಕರಣದಲ್ಲೂ ಇಳಿಕೆ ಕಂಡಿದ್ದು, ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ. ಈವರೆಗೆ ವಿಶ್ವದಲ್ಲಿ ಒಟ್ಟು 52,997 ಮಂದಿ ಮಂಕಿಪಾಕ್ಸ್ ಸೋಂಕಿಗೆ ತುತ್ತಾಗಿದ್ದಾರೆ ಎಂದು ಡಬ್ಲ್ಯೂಎಚ್‍ಒ ಮಾಹಿತಿ ಹಂಚಿಕೊಂಡಿದೆ.
Live Tv
[brid partner=56869869 player=32851 video=960834 autoplay=true]