ಬೆಂಗಳೂರು: ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆ ಮೇಲೆ ಕೋವಿಡ್ ಕಾರ್ಮೋಡ ಆವರಿಸುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಏನೇ ನಿರ್ಧಾರ ಮಾಡಿದರೂ ಅದು ಕಾಂಗ್ರೆಸ್ ಪಾದಯಾತ್ರೆಗೂ ಅನ್ವಯಿಸುತ್ತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಸ್ಫೋಟದ ಸಂದರ್ಭದಲ್ಲಿ ಕಾಂಗ್ರೆಸ್ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನು ಮುಂದೂಡುವುದು ಒಳ್ಳೆಯದು. ವಿಪಕ್ಷವಾಗಿ ಹೋರಾಡಲು ಅವರಿಗೆ ಅವಕಾಶವಿದೆ. ಈಗ ಕೋವಿಡ್ ನಿಯಮ ಪಾಲಿಸಬೇಕೆಂದು ಕೋರುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಜನವರಿ 25ಕ್ಕೆ ಸುಪ್ರೀಂಕೋರ್ಟ್‍ನಲ್ಲಿ ಮೇಕೆದಾಟು ಅರ್ಜಿ ವಿಚಾರಣೆ
Advertisement
ಸರ್ಕಾರದ ಲಾಕ್‍ಡೌನ್ ಮಾತಿನ ಹಿಂದೆ ರಾಜಕೀಯ ಷಡ್ಯಂತ್ರ್ಯವಿದೆ. ನಮ್ಮ ಹೋರಾಟ ತಡೆಯಲೆಂದೇ ಬಿಜೆಪಿಯವರು ಹೀಗೆ ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೂಷಿಸಿದ್ದಾರೆ. ಇದನ್ನೂ ಓದಿ: ರಾಮನಗರ ಶಾಂತಿಯ ಜಿಲ್ಲೆ, ಗೂಂಡಾ ರೀತಿಯ ವರ್ತನೆ ಮಾಡಿದ್ದು ತಪ್ಪು: ಎಚ್‍ಡಿಕೆ ಕಿಡಿ
Advertisement
ನಮ್ ಮೇಲೆ ಕೇಸ್, ಜೈಲಿಗೆ ಹಾಕಿದರೂ ಚಿಂತೆಯಿಲ್ಲ. ನಾವಂತೂ ಈ ಪಾದಯಾತ್ರೆ ನಿಲ್ಲಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯ ಒಬ್ಬರ ಮೇಲೆ ಕೊರೊನಾ ನಿಯಮ ಪ್ರಕರಣ ದಾಖಲಾಗಿಲ್ಲ. ಆದರೆ ನಮ್ಮ ಮೇಲೆ ಮಾಡಿದ್ದಾರೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.