ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಸೋಂಕಿಗೆ ಲಸಿಕೆ ಇಲ್ಲದಿರುವುದು ಮತ್ತಷ್ಟು ಸಂಕಷ್ಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಗಳ ಮಧ್ಯೆ ಪ್ಲಾಸ್ಮಾ ಥೆರಪಿ ಎನ್ನುವ ಚಿಕಿತ್ಸೆ ಕೊರೊನಾ ವಿರುದ್ಧದ ಹೋರಾಟಕ್ಕೆ ಸಂಜೀವಿನಿ ರೂಪದಲ್ಲಿ ಕಾಣುತ್ತಿದೆ.
ದೆಹಲಿಯ ಸಾಕೇತ್ ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗೆ ಮೊದಲ ಪ್ಲಾಸ್ಮಾ ಥೆರಪಿ ನೀಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಾಲ್ಕು ದಿನಗಳಲ್ಲಿ ಕೊರೊನಾ ಸೋಂಕು ನೆಗೆಟಿವ್ ರಿಪೋರ್ಟ್ ಬಂದಿದೆ.
Advertisement
Advertisement
ಎಪ್ರಿಲ್ ನಾಲ್ಕರಂದು 49 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಂಡು ಬಂದಿತು. ನಿರಂತರ ಚಿಕಿತ್ಸೆ ನೀಡಿದ್ರೂ ಯಾವುದೇ ಪ್ರಯೋಜನವಾಗಿರಲಿಲ್ಲ. ವೆಂಟಿಲೇಟರ್ ಮೇಲಿದ್ದು ರೋಗಿಯ ಸ್ಥಿತಿ ಕಂಡು ಕುಟುಂಬಸ್ಥರುವ ಪ್ಲಾಸ್ಮಾ ಥೆರಪಿ ಮಾಡಲು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಸೋಂಕಿನಿಂದ ಗುಣಮುಖರಾದ ವ್ಯಕ್ತಿಯ ರಕ್ತವೇ ಕೊರೊನಾಗೆ ಔಷಧಿ
Advertisement
Advertisement
ಕುಟುಂಬದ ಮನವಿ ಮೇರೆಗೆ ಎಪ್ರಿಲ್ 14ರಂದು ಸೋಂಕಿತ ವ್ಯಕ್ತಿಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಥೆರಪಿ ಬಳಿಕ ನಾಲ್ಕು ದಿನಗಳಲ್ಲಿ ಸೋಂಕಿತ ವ್ಯಕ್ತಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಮ್ಯಾಕ್ಸ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ವೆಂಟಿಲೇಟರ್ ಸಹಾಯವಿಲ್ಲದೆ ಸೋಂಕಿತ ವ್ಯಕ್ತಿ ಉಸಿರಾಡುತ್ತಿದ್ದಾನೆ ಮತ್ತು ಇತ್ತಿಚೇಗೆ ನಡೆಸಿದ ಎರಡು ಟೆಸ್ಟ್‍ಗಳಲ್ಲಿ ಸೋಂಕು ನೆಗೆಟಿವ್ ರಿಪೋರ್ಟ್ ಬಂದಿದೆ ಎಂದಿದ್ದಾರೆ. ಇದನ್ನೂ ಓದಿ: ಕೊರೊನಾ ಹೋರಾಟಕ್ಕೆ ಪ್ಲಾಸ್ಮಾ ಥೆರಪಿ ಅಸ್ತ್ರ – ಐಸಿಎಂಆರ್ ಅನುಮತಿ, ಶೀಘ್ರದಲ್ಲಿ ಆರಂಭ
ಪ್ಲಾಸ್ಮಾ ಥೆರಪಿ ಎಂದರೇನು?
ಕೊರೊನಾದಿಂದ ಚೇತರಿಸಿಕೊಂಡ ವ್ಯಕ್ತಿಯ ರಕ್ತದಲ್ಲಿ ಆ್ಯಂಟಿಬಾಡಿಗಳು ಇರುತ್ತವೆ. ಅವು ರೋಗ ನಿರೋಧಕ ಶಕ್ತಿ ಹೊಂದಿರುತ್ತವೆ. ಆ ಪ್ಲಾಸ್ಮಾವನ್ನು ತೆಗೆದು ಸೋಂಕಿತ ಅಥವಾ ಸೋಂಕು ಶಂಕೆ ಹೊಂದಿರುವ ವ್ಯಕ್ತಿಗೆ ನೀಡುವುದನ್ನೇ ಪ್ಲಾಸ್ಮಾ ಥೆರಪಿ ಎನ್ನಲಾಗುತ್ತದೆ. ಪ್ಲಾಸ್ಮಾ ಥೆರಪಿಗೆ ಒಳಗಾದ ವ್ಯಕ್ತಿಗಳು ಬೇಗನೆ ಕೊರೊನಾದಿಂದ ಗುಣಮುಖರಾಗುವುದು ವಿದೇಶಗಳಲ್ಲಿ ಸಾಬೀತಾಗಿದೆ.
ಸೋಂಕ ಮುಕ್ತವಾದ ವ್ಯಕ್ತಿ ಚೇತರಿಸಿಕೊಂಡ 28 ದಿನಗಳ ಬಳಿಕ ಪ್ಲಾಸ್ಮಾವನ್ನು ದಾನ ಮಾಡಬಹುದು, ಮೊದಲ ಪರೀಕ್ಷೆಯಲ್ಲಿ ಪಾಸಿಟಿವ್ ಬಂದು, 2ನೇ ಪರೀಕ್ಷೆಯಲ್ಲಿ ನೆಗೆಟಿವ್ ಬಂದವರು ಕೂಡಾ ದಾನ ಮಾಡಬಹುದಾಗಿದೆ. ದಾನಿಯೊಬ್ಬನ ಪ್ಲಾಸ್ಮಾವನ್ನು ಅದೇ ರಕ್ತದ ಗುಂಪಿನ ರೋಗಿಗಳಿಗೆ ಮಾತ್ರ ನೀಡಬಹುದು ಎಂದು ತಜ್ಞರು ಹೇಳಿದ್ದಾರೆ.