ರಾಯಚೂರು: ಬಿಜೆಪಿ ಜನಾಶೀರ್ವಾದ ಯಾತ್ರೆ ಹಾಗೂ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರ ವಿರುದ್ಧ ಕರವೇ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಜೈನ್ ದೂರು ದಾಖಲಿಸಿದ್ದಾರೆ.
Advertisement
ಬಿಜೆಪಿ ಜನಾಶೀರ್ವಾದ ಯಾತ್ರೆ ಮೂಲಕ ಕೋವಿಡ್ ನಿಯಮ ಹಾಗೂ ನೈಟ್ ಕರ್ಫ್ಯೂ ಉಲ್ಲಂಘನೆ ಆಗಿದೆ. ಕೇಂದ್ರ ಸಚಿವ ಭಗವಂತ ಖೂಬಾ, ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್ ವಿರುದ್ಧ ದೂರು ದಾಖಲಿಸಲಾಗಿದೆ. ಆಗಸ್ಟ್ 17 ರಂದು ರಾತ್ರಿ 9 ಗಂಟೆ ಮೇಲ್ಪಟ್ಟು ಮೆರವಣಿಗೆ, ಸಭೆ ನಡೆಸಿ ನೈಟ್ ಕರ್ಫ್ಯೂ ಉಲ್ಲಂಘನೆ ಮಾಡಿದ್ದರು.ಇದನ್ನೂ ಓದಿ:ಕೇಂದ್ರ ಸಚಿವರ ಎಡವಟ್ಟು- ಹುತಾತ್ಮ ಯೋಧನ ಬದಲು, ಕರ್ತವ್ಯ ನಿರತ ಯೋಧನ ಕುಟುಂಬಕ್ಕೆ ಸಾಂತ್ವನ
Advertisement
Advertisement
ಆಗಸ್ಟ್ 16 ರಂದು ಕಲಬುರಗಿ ವಿಭಾಗದ ಮಟ್ಟದ ಸಭೆ ಮೂಲಕ ಕಾಂಗ್ರೆಸ್ಸಿನಿಂದ ಕೋವಿಡ್ ನಿಯಮ ಉಲ್ಲಂಘನೆಯಾಗಿದೆ. ಕೋವಿಡ್ ನಿಯಮ ಪಾಲಿಸದೇ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ, ಬೈಕ್ ರ್‍ಯಾಲಿ ನಡೆಸಲಾಗಿದೆ. ಖಾಸಗಿ ಕಟ್ಟಡದಲ್ಲಿ ಸಾವಿರಾರು ಜನ ಸೇರಿ ಸಭೆ ನಡೆಸಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ವಿ.ನಾಯಕ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ್, ಶಾಸಕ ಬಸನಗೌಡ ದದ್ದಲ ವಿರುದ್ಧ ರಾಯಚೂರು ಡಿವೈಎಸ್‍ಪಿ ಶಿವನಗೌಡ ಪಾಟೀಲ್‍ಗೆ ದೂರು ನೀಡಿದ್ದಾರೆ. ಕಾನೂನು ಸರ್ವರಿಗೂ ಒಂದೇ ಆಗಿದ್ದು ರಾಜಕೀಯ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಅಶೋಕ್ ಕುಮಾರ್ ಜೈನ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ:ಕೊರಿಯಾಗೆ ಕಳುಹಿಸಿದ ಸ್ವಾರಸ್ಯಕರ ಕಥೆ ಹೇಳಿದ್ರು ಡಿ.ಕೆ ಶಿವಕುಮಾರ್
Advertisement