ಬೆಂಗಳೂರು: ಕೋವಿಡ್ ಸಮಯದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ನ್ಯಾ.ಮೈಕಲ್ ಡಿ ಕುನ್ನಾ ವರದಿ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಚೀನಾದಿಂದ ಪಿಪಿಇ ಕಿಟ್ ಖರೀದಿಸಿದ ವಿಚಾರವೇ ಈಗ ಕಾಂಗ್ರೆಸ್ ಸರ್ಕಾರದ ಪಾಲಿಗೆ ಬ್ರಹ್ಮಾಸ್ತ್ರವಾಗಿದೆ. ಇನ್ನೂ ನ್ಯಾ.ಮೈಕಲ್ ಡಿ ಕುನ್ನಾ ವರದಿಯಲ್ಲಿ ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಿರುವ ಅಂಶ ಬೆಳಕಿಗೆ ಬಂದಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಕೇಸ್ ದಾಖಲಿಸಿ ತನಿಖೆಗೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.
Advertisement
2020 ಏಪ್ರಿಲ್‍ನಲ್ಲಿ ಚೀನಾದ ಎರಡು ಕಂಪನಿಗಳಿಂದ ಪಿಪಿಇ ಕಿಟ್ ಖರೀದಿಸುವಲ್ಲಿ ಅಕ್ರಮ ಎಸಗಲಾಗಿದೆ ಎಂಬುದು ವರದಿಯಲ್ಲಿ ಉಲ್ಲೇಖವಾಗಿದೆ. ಅಂದಿನ ಸಿಎಂ, ಅಂದಿನ ಆರೋಗ್ಯ ಸಚಿವರ ವಿರುದ್ಧ ತನಿಖೆಗೆ ಶಿಫಾರಸು ಮಾಡಲಾಗಿದೆ. ಉಪಚುನಾವಣೆ ಮುಗಿದ ಬಳಿಕ ರಾಜ್ಯ ಸರ್ಕಾರದಿಂದ ಮುಂದಿನ ಪ್ರಕ್ರಿಯೆಯ ಬಗ್ಗೆ ತೀರ್ಮಾನಿಸುವ ಸಾಧ್ಯತೆ ಇದೆ.
Advertisement
Advertisement
ಡಿ.ಕೆ.ಶಿವಕುಮಾರ್ ನೇತೃತ್ವದ ಸಂಪುಟ ರಚನೆಯಾಗಿದ್ದು, ಮೊದಲ ಸಭೆಯಲ್ಲಿ ಪ್ರಾಥಮಿಕ ಅಂಶಗಳ ಬಗ್ಗೆ ಚರ್ಚೆ ನಡೆದಿದೆ. ಉಪಚುನಾವಣೆ ಬಳಿಕ ಸಂಪುಟ ಉಪಸಮಿತಿಯ ಎರಡನೇ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಯಡಿಯೂರಪ್ಪ, ರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಪ್ರಕ್ರಿಯೆ ಬಗ್ಗೆ ತೀರ್ಮಾನ ಮಾಡಿ ಸಂಪುಟ ಸಭೆ ಶಿಫಾರಸು ಮಾಡಲಿದೆ. ಬಳಿಕ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
ಜಸ್ಟೀಸ್ ಕುನ್ನಾ ಮಧ್ಯಂತರ ವರದಿ ಶಿಫಾರಸು ಏನು?
> 2020, ಏಪ್ರಿಲ್‍ನಲ್ಲಿ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ
> ಚೀನಾದ ಎರಡು ಕಂಪನಿಗಳಿಂದ ಪಿಪಿಇ ಕಿಟ್ ಖರೀದಿ
> ಸುಮಾರು 3 ಲಕ್ಷ ಪಿಪಿಇ ಕಿಟ್‍ಗಳನ್ನ ದುಬಾರಿ ಬೆಲೆಗೆ ಖರೀದಿಸಿದ್ದಾರೆ
> ಪಿಪಿಇ ಕಿಟ್ ಖರೀದಿಯಲ್ಲೇ ಸುಮಾರು 14 ಕೋಟಿ ಅಕ್ರಮ ಆಗಿದೆ
> ಟೆಂಡರ್ ಕರೆದಿಲ್ಲ, ಖರೀದಿ ನಿಯಮಗಳು, ಕಾರ್ಯವಿಧಾನ ಅನುಸರಿಸಿಲ್ಲ
> ಅಂದಿನ ಸಿಎಂ ಯಡಿಯೂರಪ್ಪ, ಅಂದಿನ ಆರೋಗ್ಯ ಸಚಿವ ರಾಮುಲು ಅವರ ಆದೇಶದ ಮೇರೆಗೆ ಖರೀದಿ
> ಹಾಗಾಗಿ ಅಂದಿನ ಸಿಎಂ, ಆರೋಗ್ಯ ಸಚಿವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಸೆಕ್ಷನ್ 7ರ ಅಡಿ ತನಿಖೆ ನಡೆಸಬೇಕು, ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಉಲ್ಲೇಖಿಸಲಾಗಿದೆ.