ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ನಡೆಯಲಾಗಿದೆ ಎನ್ನಲಾದ ಅಕ್ರಮದ (Covid-19 scam) ತನಿಖೆಗೆ ಕೌಂಟ್ ಡೌನ್ ಶುರುವಾಗಿದೆ. ಐವರು ವೈದ್ಯರು, ಐಎಜಿ ಎಕ್ಸ್‌ಪೋರ್ಟ್ ಕಂಪನಿ ಹಾಗೂ ಜನಪ್ರತಿನಿಧಿಗಳ ಮೇಲೆ ವಿಧಾನಸೌಧ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ತನಿಖೆಗೆ ಎಸ್‍ಐಟಿ (SIT) ರಚನೆಯಾಗುವ ಸಾಧ್ಯತೆ ಇದೆ. ಇದರಿಂದ ಅಂದಿನ ಸಚಿವರು ಹಾಗೂ ಕೆಲವು ಜನಪ್ರತಿನಿಧಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಎಫ್‍ಐಆರ್ ದಾಖಲಾದ ಬಗ್ಗೆ ಉನ್ನತ ಪೊಲೀಸ್ ಅಧಿಕಾರಿಗಳಿಂದ `ಪಬ್ಲಿಕ್ ಟಿವಿ’ಗೆ ಮಾಹಿತಿ ಬಂದಿದೆ.
ಒಬ್ಬ ಡಾಕ್ಟರ್, ಇಬ್ಬರು ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು ಮತ್ತು ರಾಜಕಾರಣಿಗಳು ಎಂದು ಎಫ್‍ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಯಾವೊಬ್ಬ ರಾಜಕಾರಣಿ ಹೆಸರು ಉಲ್ಲೇಖಿಸದೇ 10 ಪುಟಗಳ ಎಫ್‍ಐಆರ್ ದಾಖಲಾಗಿದೆ.