ನವದೆಹಲಿ: ಕೋವಿಡ್ 19 ಕೆಂಪು, ಕಿತ್ತಳೆ, ಹಸಿರು ವಲಯಗಳ ಪರಷ್ಕೃತ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕರ್ನಾಟಕದ 8 ಜಿಲ್ಲೆಗಳು ಕೆಂಪು ವಲಯದಲ್ಲಿ ಸ್ಥಾನ ಪಡೆದಿದೆ.
ರಾಮನಗರ ಸೇರಿದಂತೆ 12 ಜಿಲ್ಲೆಗಳು ಹಸಿರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, 10 ಜಿಲ್ಲೆಗಳು ಕಿತ್ತಾಳೆ ವಲಯದಲ್ಲಿ ಸ್ಥಾನ ಪಡೆದಿದೆ.
Advertisement
Advertisement
ಯಾವ ಜಿಲ್ಲೆ ಯಾವ ವಲಯದಲ್ಲಿದೆ?
ಕೆಂಪು ವಲಯ: ಬಾಗಲಕೋಟೆ, ಬೆಂಗಳೂರು ನಗರ, ಬೆಳಗಾವಿ, ಬೀದರ್, ದಕ್ಷಿಣ ಕನ್ನಡ, ಧಾರವಾಡ, ಕಲಬುರಗಿ ಗ್ರಾಮೀಣ, ಮೈಸೂರು. ಅತಿ ಹೆಚ್ಚು ಕೊರೊನಾ ಪ್ರಕರಣಗಳು ಬೆಳಕಿಗೆ ಬಂದ ಜಿಲ್ಲೆಗಳನ್ನು ಈ ಪಟ್ಟಿಗೆ ಸೇರಿಸಲಾಗುತ್ತದೆ.
Advertisement
ಕಿತ್ತಾಳೆ ವಲಯ: ಬಳ್ಳಾರಿ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ್, ಮಂಡ್ಯ, ತುಮಕೂರು ನಗರ, ಉಡುಪಿ, ಉತ್ತರ ಕನ್ನಡ, ವಿಜಯಪುರ. ಕಳೆದ 14 ದಿನಗಳಿಂದ ಯಾವುದೇ ಪ್ರಕರಣ ಬಾರದೇ ಇದ್ದರೆ ಅಥವಾ ಕಡಿಮೆ ಪಾಸಿಟಿವ್ ಪ್ರಕರಣ ಬಂದಿದ್ದರೆ ಈ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತದೆ.
Advertisement
ಹಸಿರು ವಲಯ: ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ಹಾಸನ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ಯಾದಗಿರಿ. ಯಾವುದೇ ಕೊರೊನಾ ಪ್ರಕರಣಗಳು ಪತ್ತೆಯಾಗದ ಜಿಲ್ಲೆಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತದೆ.
ರೆಡ್ ಝೋನ್ ಗ್ರೀನ್ ಆಗಬೇಕಾದರೆ ಮಾನದಂಡ ಏನು?
28 ದಿನಗಳ ಕಾಲ ಯಾವುದೇ ಪ್ರಕರಣ ಬೆಳಕಿಗೆ ಬಾರದೇ ಇದ್ದಲ್ಲಿ ರೆಡ್ ಝೋನ್ ಹಸಿರು ವಲಯಕ್ಕೆ ಹೋಗುತ್ತದೆ. 14 ದಿನ ಯಾವುದೇ ಪಾಸಿಟಿವ್ ಪ್ರಕರಣ ದಾಖಲಾಗದೇ ಇದ್ದಲ್ಲಿ ಕಿತ್ತಳೆ ವಲಯದಲ್ಲಿರುವ ಜಿಲ್ಲೆ ಹಸಿರು ವಲಯದ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತದೆ.