ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಖಚಿತ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿವೆ. ಆದರೆ, ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಳವಾಗುವ ಸಾಧ್ಯತೆಯೂ ಕೂಡ ಇದೆ. ಜೊತೆಗೆ ಸಂಭಾವ್ಯ ಕೋವಿಡ್ ಮೂರನೇ ಅಲೆಯ ಭೀತಿಯನ್ನು ತಪ್ಪಿಸಲು ಲಸಿಕೆ ಪಡೆಯದೇ ಓಡಾಟ ನಡೆಸುವವರ ಮೇಲೆ ಪಾಲಿಕೆ ನಿಗಾ ವಹಿಸಿದೆ.
Advertisement
ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್, ನಗರ ಪ್ರದೇಶದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಅನುಷ್ಠಾನಗೊಳಿಸಿ, ಸಂಭಾವ್ಯ ಕೋವಿಡ್ ಮೂರನೇ ಅಲೆಯ ಭೀತಿಯನ್ನು ತಪ್ಪಿಸಲು, ನಗರ ವ್ಯಾಪ್ತಿಯಲ್ಲಿ ಕೋವಿಡ್ ಸಮುಚಿತ ವರ್ತನೆ ಪಾಲನೆಯಾಗುತ್ತಿರುವುದರ ಬಗ್ಗೆ ನಿಗಾವಹಿಸುವುದು ಅನಿವಾರ್ಯವಾಗಿರುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಅಪಾರ್ಟ್ಮೆಂಟ್‌ಗೆ ಬೆಂಕಿ – 46 ಸಾವು, 41 ಜನರಿಗೆ ಗಾಯ
Advertisement
Advertisement
ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯದವರನ್ನು ಗುರುತಿಸಿ, ಲಸಿಕೆ ಕೊಡಿಸುವ ಕೆಲಸ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಇದೇ ಅ.14 ರಿಂದ 16 ರವರೆಗೆ ನಗರದ ವಿವಿಧೆಡೆ ಹಮ್ಮಿಕೊಳ್ಳಲಾಗಿರುವ ಲಸಿಕಾ ಮೇಳಗಳ ಸಂಪೂರ್ಣ ಲಾಭವನ್ನು ನಾಗರಿಕರು ಪಡೆಯಬೇಕು. ತಪ್ಪಿದಲ್ಲಿ ಅ.16 ರಂದು ಮಾಲ್, ಸಹಿತ ಎಲ್ಲಾ ಸಾರ್ವಜನಿಕ ಸ್ಥಳಗಳು ಸೇರಿದಂತೆ ಸಾರ್ವಜನಿಕರಿಗೆ ಲಸಿಕೆ ಪಡೆದ ದಾಖಲೆ ಇಲ್ಲದೆ, ಬೇಕಾಬಿಟ್ಟಿ ಓಡಾಡುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ 13 ಸಾವಿರಕ್ಕೂ ಹೆಚ್ಚು ಕೋಳಿಗಳ ಮಾರಣಹೋಮ – ರೈತ ಕಂಗಾಲು
Advertisement