ಬೆಂಗಳೂರು: 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ವಿತರಣೆ ಇಂದಿನಿಂದ ಆರಂಭವಾಗಿದೆ. ಇಂದು ಬಿಬಿಎಂಪಿ ಮಹಿಳೆಯರ ಪದವಿ ಮತ್ತು ಸ್ನಾತಕೋತ್ತರ ಕಾಲೇಜು ಮೂಡಲಪಾಳ್ಯದಲ್ಲಿ ಮಕ್ಕಳ ಲಸಿಕೆ ಅಭಿಯಾನಕ್ಕೆ ದೀಪ ಬೆಳಗಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಸತಿ ಸಚಿವ ವಿ.ಸೋಮಣ್ಣ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ , ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ದೀಪಾ ಬೆಳಗಿಸಿ ಚಾಲನೆ ನೀಡಿದರು.
Advertisement
ರಾಜ್ಯ ಬಿಜೆಪಿ ಯುವ ಮುಖಂಡ ಡಾ.ಅರುಣ್ ಸೋಮಣ್ಣರವರು, ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡ, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ದಾಸೇಗೌಡ, ಕೆ.ಉಮೇಶ್ ಶೆಟ್ಟಿ, ಮೋಹನ್ ಕುಮಾರ್, ವಾಗೇಶ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಸಂಸದ ರೇವಂತ್ ರೆಡ್ಡಿಗೆ ಕೊರೊನಾ ಪಾಸಿಟಿವ್
Advertisement
Advertisement
ಇದೇ ವೇಳೆ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಲಸಿಕಾ ಕಾರ್ಯಕ್ರಮ ಹೊಸ ವರ್ಷದಲ್ಲಿ ಆಗುತ್ತಿದೆ. ಎಲ್ಲರಿಗೂ ಸುರಕ್ಷಿತ ಆರೋಗ್ಯ ಭಾಗ್ಯ ನಿಮ್ಮದಾಗಲಿ. ಕೊರೊನಾ ಯಾರೂ ನಿರೀಕ್ಷಿಸಿರಲಿಲ್ಲ. ದೇಶ ಕೊರೊನಾ ಎದುರಿಸಿದ ರೀತಿ ಹಾಗೂ ಲಸಿಕೆ ಅಭಿಯಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಮೂರನೇ ಅಲೆ ಅಕ್ಕಪಕ್ಕದ ರಾಜ್ಯದಲ್ಲಿ ಬಹಳ ಹೆಚ್ಚಿದೆ. ರಾಜ್ಯದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
Advertisement
ಗಡಿಯಲ್ಲಿ ಭದ್ರತೆ, ಆರ್‍ಟಿಪಿಸಿಆರ್ ಪರೀಕ್ಷೆ, ಕೋವಿಡ್ ಟೆಸ್ಟ್, ಲಸಿಕೆ ಹೆಚ್ಚು ಮಾಡಲಾಗುತ್ತಿದೆ. ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸೋಂಕು ಹೆಚ್ಚಾಗಿದೆ. ಮಕ್ಕಳ ಆರೋಗ್ಯ ಬಹಳ ಮುಖ್ಯ. ಇಂದಿನಿಂದ ಪ್ರಥಮ ಲಸಿಕೆ ಡೋಸ್ ನೀಡಲಾಗುತ್ತದೆ. 2ನೇ ಡೋಸ್ ಕೂಡಾ ಅವಧಿ ಬಂದಾಗ ಆರಂಭಿಸಲಾಗುತ್ತದೆ ಮತ್ತು ರಾಜ್ಯದಲ್ಲಿ 43 ಲಕ್ಷ, ಬೆಂಗಳೂರಲ್ಲಿ ಒಟ್ಟು 4 ಲಕ್ಷ 41 ಸಾವಿರ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಇಂದು ಒಂದೇ ದಿನ 40 ಸಾವಿರ ಮಕ್ಕಳಿಗೆ ಲಸಿಕೆ ನೀಡಲು ಸಿದ್ಧತೆ ಮಾಡಲಾಗುತ್ತಿದೆ. ನಗರದ 255 ಶಾಲಾ ಕಾಲೇಜಿನಲ್ಲಿ ಲಸಿಕೆ ಕೊಡಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಓಮಿಕ್ರಾನ್ ವೇಗವಾಗಿ ಹರಡುತ್ತಿದ್ದು, ವೈರಲ್ ಫೀವರ್ನಂತಿದೆ: ಯೋಗಿ ಆದಿತ್ಯನಾಥ್
ನಂತರ ಮಾತನಾಡಿದ ವಿ.ಸೋಮಣ್ಣ ಅವರು, ಮೂರನೇ ಅಲೆ ಎಷ್ಟರ ಮಟ್ಟಿಗೆ ಗಂಭೀರ ಅನ್ನುವುದಕ್ಕಿಂತ ಎಲ್ಲರೂ ಲಸಿಕೆ ಪಡೆಯುವುದು ಮುಖ್ಯ. ಜನಜಂಗುಳಿ ತಪ್ಪಿಸಿ, ಮಾಸ್ಕ್ ಧರಿಸುವುದರಿಂದ ಈ ಸೋಂಕನ್ನು ತಡೆಗಟ್ಟಬಹುದು. ಈ ಕ್ಷೇತ್ರದ ಸರ್ಕಾರಿ ಶಾಲೆ ಮಕ್ಕಳಿಗೆ ಎಲ್ಲಾ ರೀತಿಯ ಸುರಕ್ಷತೆ ನೀಡಲಾಗುತ್ತಿದೆ ಎಂದರು.