ಬೆಂಗಳೂರು: ಪೀಣ್ಯ ಕೈಗಾರಿಕೆಗಳು ಕೋವಿಡ್ 3ನೇ ಅಲೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ.
ಕೈಗಾರಿಕೆಗಳು ಕಚ್ಚಾ ಪದಾರ್ಥಗಳ ಬೆಲೆ ಹೆಚ್ಚಳದಿಂದ ಕಂಗಾಲಾಗಿವೆ. ಪೀಣ್ಯ ಕೈಗಾರಿಕಾ ವಲಯದಲ್ಲಿ ಸುಮಾರು 1 ಸಾವಿರ ಕೈಗಾರಿಕೆಗಳು ಈಗಾಗಲೇ ಮುಚ್ಚಲ್ಪಟ್ಟಿವೆ. ಕಚ್ಚಾ ವಸ್ತುಗಳ ಬೆಲೆ ಕಡಿಮೆ ಮಾಡಿಸುವಂತೆ ಕೈಗಾರಿಕಾ ಉದ್ಯಮಿಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಬೆಲೆ ಏರಿಕೆಯಿಂದ ಕೊರೊನಾದಿಂದ ಉದ್ಯಮಿಗಳು ನಷ್ಟದ ಮೇಲೆ ನಷ್ಟ ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ಶಿವರಾಮೇಗೌಡ ಸರ್ಕಸ್‍ನಲ್ಲಿನ ಜೋಕರ್: ಮಧು ಮಾದೇಗೌಡ
Advertisement
Advertisement
ಅಲ್ಯುಮಿನಿಯಮ್, ತಾಮ್ರ, ಸತು, ಸೇರಿದಂತೆ ಹಲವು ಪದಾರ್ಥಗಳ ಬೆಲೆ ಏರಿಕೆಯಾಗಿದ್ದು, ಕಚ್ಚಾ ಪದಾರ್ಥಗಳನ್ನು ಕೊಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. 40-75% ರಷ್ಟು ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಎಷ್ಟೇ ಮನವಿ ಮಾಡಿಕೊಂಡರೂ ಸಹ ಉಪಯೋಗ ಆಗುತ್ತಿಲ್ಲ. ಸಣ್ಣ ಕೈಗಾರಿಕೆಗಳು ದೊಡ್ಡ ಪ್ರಮಾಣದ ನಷ್ಟದಲ್ಲಿವೆ. ಬ್ಯಾಂಕ್‍ಗಳಲ್ಲಿ ಸಣ್ಣ ಕೈಗಾರಿಕೆಗಳಿಗೆ ಸಾಲ ನೀಡುತ್ತಿಲ್ಲ ಎಂದು ಉದ್ಯಮಿಗಳು ತಮ್ಮ ಅಳಲು ತೊಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಫುಟ್‍ಪಾತ್ ಮೇಲೆ ಕಾರು ಚಾಲನೆ – ಅಪ್ರಾಪ್ತನ ಹುಚ್ಚಾಟಕ್ಕೆ ನಾಲ್ವರು ಬಲಿ
Advertisement
Advertisement
ಇದೇ ರೀತಿ ಮುಂದುವರಿದರೆ ಸಣ್ಣ ಕೈಗಾರಿಕೆಗಳನ್ನು ಬಂದ್ ಮಾಡಬೇಕಾಗುತ್ತೆ. ಈಗಾಗಲೇ 1 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳು ಬಾಗಿಲು ಮುಚ್ಚಿವೆ. ಇದೇ ರೀತಿ ಮುಂದುವರೆದರೆ ಮುಂದಿನ ದಿನದಲ್ಲಿ ಮತ್ತಷ್ಟು ಕೈಗಾರಿಕೆಗಳನ್ನು ಬಾಗಿಲು ಮುಚ್ಚುವ ಆತಂಕದಲ್ಲಿವೆ ಎಂದು ನೋವನ್ನು ವ್ಯಕ್ತಪಡಿಸಿದ್ದಾರೆ.