ಮಂಡ್ಯ: ಕೆರೆ ಅಂಗಳದಲ್ಲಿರುವ ಬಿಸಿಎಂ ಹಾಸ್ಟೆಲ್‌ನಲ್ಲಿ ಕೋವಿಡ್ ಸೆಂಟರ್ ತೆರೆಯಲು ಮುಂದಾದ ಕ್ರಮಕ್ಕೆ ಮಂಡ್ಯ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿದ್ದು ಮುಂದಿನ ತಿಂಗಳು ನಮಗೆ ಪರೀಕ್ಷೆ ಇದೆ. ಆದರೆ ಈಗ ಹಾಸ್ಟೆಲ್ ಬಿಟ್ಟು ಕೊಡುವಂತೆ ಹೇಳಿದ್ದಾರೆ. ಬೇರೆ ಹಾಸ್ಟೆಲ್‌ನಲ್ಲಿ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಅಲ್ಲಿಗೆ ನಮ್ಮನ್ನು ಕಳುಹಿಸುವುದರಿಂದ ನಮಗೆ ಓದಿಕೊಳ್ಳಲು ತೊಂದರೆಯಾಗುತ್ತದೆ ಎಂದು ಕಷ್ಟವನ್ನು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಉಡುಪಿ ಹಿಜಬ್ ವಿವಾದ – NSUI ಭೇಟಿ ನಿರಾಕರಿಸಿದ ಕಾಲೇಜು ಆಡಳಿತ ಮಂಡಳಿ
ಇನ್ನೊಂದೆಡೆ ಸ್ಥಳೀಯರು ಇಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡಿದರೆ ನಮಗೂ ತೊಂದರೆಯಾಗುತ್ತೆ, ನಮ್ಮನ್ನು ದಿನಗೂಲಿ ಕೆಲಸಕ್ಕೆ ಎಲ್ಲಿಯೂ ಕರೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕ್ಷೇತ್ರದ ಸಮಸ್ಯೆ ಹೇಳಲು ಫೋನ್ ಮಾಡಿದ್ದ ಮಹಿಳೆಗೆ ಅನಿಲ್ ಬೆನಕೆ ಅವಾಜ್
ಪ್ರತಿಭಟನಾ ಸ್ಥಳಕ್ಕೆ ಹಿಂದುಳಿದ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಹರೀಶ್ ಭೇಟಿ ನೀಡಿ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದ್ದಾರೆ. ಜಿಲ್ಲಾಧಿಕಾರಿ ಸೂಚನೆಯಂತೆ ವಿದ್ಯಾರ್ಥಿಗಳನ್ನು ಸೂಕ್ತ ಸ್ಥಳಕ್ಕೆ ವರ್ಗಾಯಿಸುವುದಾಗಿ ತೀರ್ಮಾನಿಸಲಾಗಿದೆ. ಆದರೆ ಇಲ್ಲಿ ಕ್ವಾರಂಟೈನ್ ಕೇಂದ್ರ ಬೇಡ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದು, ಅಧಿಕಾರಿಗಳೊಂದಿಗೆ ತರಾಟೆ ನಡೆಸಿದ್ದಾರೆ.