ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣ (Covid Scam) ಆರೋಪ ಪ್ರಕರಣದ ಮಧ್ಯಂತರ ವರದಿಯನ್ನು ಜಸ್ಟೀಸ್ ಮೈಕಲ್ ಡಿ ಕುನ್ಹಾ (John Michael DCunha) ಆಯೋಗ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ.
ಕೋವಿಡ್ ಸಂದರ್ಭದ ಹಗರಣಗಳ ತನಿಖೆಗೆ ನೇಮಿಸಲಾಗಿದ್ದ ತನಿಖಾ ಆಯೋಗದ ಮುಖ್ಯಸ್ಥರಾದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೇಲ್ ಡಿ ಕುನ್ಹಾ ಅವರು ತನಿಖೆಯ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ @siddaramaiah ಅವರಿಗೆ ಒಪ್ಪಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/Fswxzu7L2z
— CM of Karnataka (@CMofKarnataka) April 5, 2025
ಕುನ್ಹಾ ಅವರು ತನಿಖೆಯ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರಿಗೆ ಒಪ್ಪಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಮಧೂರು ಮಹಾಗಣಪತಿಗೆ 33 ವರ್ಷಗಳ ಬಳಿಕ ಇಂದು ಮೂಡಪ್ಪ ಸೇವೆ
ಬಿಜೆಪಿ ಸರ್ಕಾರದ ಅವಧಿಯಲ್ಲಿ 2,000 ಕೋಟಿ ರೂ.ಗಿಂತಲೂ ಅಧಿಕ ಅಕ್ರಮ ನಡೆದಿದೆ ಅಂತ ಆರೋಪ ಕೇಳಿಬಂದಿತ್ತು. ಹಗರಣದ ಬಗ್ಗೆ ವರದಿ ಸಲ್ಲಿಸಲು ಕಾಂಗ್ರೆಸ್ ಸರ್ಕಾರ 2023 ಆಗಸ್ಟ್ ನಲ್ಲಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಮೈಕಲ್ ಡಿ ಕುನ್ಹಾ ನೇತೃತ್ವದ ಆಯೋಗ ರಚನೆ ಮಾಡಿತ್ತು. ಈ ಸಂಬಂಧ ಸುದೀರ್ಘ ತನಿಖೆ ನಡೆಸಿದ್ದ ಮೈಕೇಲ್ ಡಿ ಕುನ್ಹಾ ನೇತೃತ್ವದ ತನಿಖಾ ಆಯೋಗ ಸಿಎಂ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯಗೆ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. ಇದನ್ನೂ ಓದಿ: ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಮಾಡಿ: ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹ
ಮೊದಲ ವರದಿಯಲ್ಲಿ ವರದಿಯಲ್ಲಿ ಏನಿತ್ತು?
* 330 ರಿಂದ 750ರ ದರದಲ್ಲಿ ಪಿಪಿಇ ಕಿಟ್‌ಗಳನ್ನು ಪೂರೈಸಲು ದೇಶೀಯ ಕಂಪನಿಗಳು ಸಿದ್ದವಿದ್ದವು. ಈ ಕಂಪನಿಗಳಿಂದಲೇ ಕಿಟ್ ಖರೀದಿಸಬೇಕು ಎಂದು ಅಧಿಕಾರಿಗಳು ಶಿಫಾರಸು ಮಾಡಿದ್ದರೂ, ಅದನ್ನು ಬದಿಗೊತ್ತಲಾಗಿದೆ. 2,049ರಿಂದ 2,117 ದರದಲ್ಲಿ 3 ಲಕ್ಷ ಕಿಟ್‌ಗಳನ್ನು ಚೀನಾದ ಕಂಪನಿಗಳಿಂದ ಖರೀದಿಸುವ ಒಪ್ಪಂದಕ್ಕೆ ಸ್ವತಃ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವ ಸಹಿ ಹಾಕಿದ್ದಾರೆ. ಮೂಲ ಖರೀದಿ ನಿಯಮಗಳು ಮತ್ತು ಕಾರ್ಯವಿಧಾನ ಅನುಸರಿಸದೆ, ಟೆಂಡರ್ ಕರೆಯದೆ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೂಲಕ ರಾಜ್ಯದ ಬೊಕ್ಕಸಕ್ಕೆ ಅಪಾರವಾದ ನಷ್ಟ ಉಂಟು ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ಹಕ್ಕಿ ಜ್ವರ ಹರಡುತ್ತಿರುವ ಹಿನ್ನೆಲೆ ಎಲ್ಲಾ ಪೌಲ್ಟ್ರಿ ಫಾರಂಗಳ ಮೇಲೆ ಕಣ್ಣಿಡಲು ಕೇಂದ್ರ ಸೂಚನೆ
* 2020ರ ಏಪ್ರಿಲ್‌ನಲ್ಲಿ ಚೀನಾದ ಡಿಎಚ್‌ಬಿ ಗ್ಲೋಬಲ್ ಹಾಂಗ್‌ಕಾಂಗ್ ಮತ್ತು ಬಿಗ್ ಫಾರ್ಮಾಸ್ಯುಟಿಕಲ್ಸ್ ಕಂಪನಿಗಳ ಜತೆ 62.71 ಕೋಟಿಗೆ ಮಾಡಿಕೊಂಡ ಒಪ್ಪಂದದಲ್ಲಿ ಎಲ್ಲ ಸ್ವರೂಪದ ಸಾಗಣೆ ವೆಚ್ಚವೂ ಸೇರಿತ್ತು. ಹೀಗಿದ್ದೂ, ಈ ಎರಡೂ ಕಂಪನಿಗಳಿಗೆ ಹೆಚ್ಚುವರಿಯಾಗಿ ಒಟ್ಟು 14.21 ಕೋಟಿ ಸಾಗಣೆ ವೆಚ್ಚ ನೀಡಲಾಗಿದೆ. ಇವೆಲ್ಲವೂ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರ ಕಣ್ಗಾವಲಿನಲ್ಲೇ ನಡೆದಿದೆ ಎಂದು ವರದಿಯಲ್ಲಿ ಹೇಳಲಾಗಿತ್ತು. ಇದನ್ನೂ ಓದಿ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಾಗಿ ನ್ಯಾ. ವರ್ಮಾ ಪ್ರಮಾಣ ವಚನ ಸ್ವೀಕಾರ
* ಅಂದಹಾಗೆ ಕೋವಿಡ್ ವೇಳೆ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಈ ಅವಧಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ ನೀಡಿತ್ತು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಕೋವಿಡ್ ಅಕ್ರಮದ ತನಿಖೆಗೆ ಆಯೋಗವನ್ನು ರಚಿಸಿತ್ತು. ಇದನ್ನೂ ಓದಿ: ನ್ಯಾಮತಿ ಬ್ಯಾಂಕ್ ದರೋಡೆಗೂ ಮುನ್ನ ಪೂಜೆ ಸಲ್ಲಿಸಿದ್ದ ದೇವಾಲಯದಲ್ಲಿ ಕಳ್ಳತನ!