– ಬಿಜೆಪಿ ಸರ್ಕಾರದ ಅವಧಿಯಲ್ಲಿ 2,000 ಕೋಟಿಗೂ ಅಧಿಕ ಅಕ್ರಮ ನಡೆದಿದೆ ಅಂತ ಆರೋಪ
ಬೆಂಗಳೂರು: ಬಿಜೆಪಿ ಸರ್ಕಾರದ (BJP government) ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣ ಆರೋಪ ಪ್ರಕರಣದ (Covid Scam Case) ವರದಿ ಸಲ್ಲಿಕೆ ಆಗಿದೆ.
ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಬಿಗ್ ಶಾಕ್ ಸಿಗುವ ಸಾಧ್ಯತೆಯಿದೆ. ಕೋವಿಡ್ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್ (Congress) ನಾಯಕರಿಗೆ ಈಗ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ವರದಿ ಕೈಸೇರಿದ ಬೆನ್ನಲ್ಲೇ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ, ಸಚಿವ ಎಂ.ಬಿ ಪಾಟೀಲ್, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸರಚಿವರು ಸಮಾಲೋಚನೆ ನಡೆಸಿದ್ದಾರೆ.
Advertisement
Advertisement
ಜಸ್ಟೀಸ್ ಜಾನ್ ಮೈಕಲ್ ಡಿ. ಕುನ್ಹಾ (John Michael DCunha) ನೇತೃತ್ವದ ಆಯೋಗ ತನಿಖಾ ವರದಿಯನ್ನ ಸರ್ಕಾರಕ್ಕೆ ಸಲ್ಲಿಸಿದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ (Siddaramaiah) ಭೇಟಿ ಮಾಡಿದ ಜಸ್ಟೀಸ್ ಜಾನ್ ಮೈಕಲ್ ಡಿ.ಕುನ್ಹಾ ತನಿಖಾ ವರದಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: Paris Paralympics 2024 | ಭಾರತಕ್ಕೆ ಮತ್ತೊಂದು ಪದಕ – ಕಂಚಿಗೆ ರುಬಿನಾ ಶೂಟ್
Advertisement
Advertisement
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಕಾಲದ ಹಗರಣಗಳ ಆರೋಪಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲು ತನಿಖಾ ಆಯೋಗ ರಚಿಸಲಾಗಿತ್ತು. 2023 ಆಗಸ್ಟ್‌ನಲ್ಲಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಜಾನ್ ಮೈಕೆಲ್ ಡಿ.ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದ್ದ ಸಿದ್ದರಾಮಯ್ಯ ಸರ್ಕಾರ ವರದಿ ನೀಡುವಂತೆ ಸೂಚಿಸಿತ್ತು. ಇದನ್ನೂ ಓದಿ: ರೋಟಿ-ಸಬ್ಜಿಯಿಂದ ತೃಪ್ತಿಯಾಗ್ತಿಲ್ಲ, ಮೊಟ್ಟೆ ಊಟ ಕೊಡಿ; ಕೋಲ್ಕತ್ತಾ ವೈದ್ಯೆ ರೇಪ್ ಆರೋಪಿ ಡಿಮ್ಯಾಂಡ್
ವೆಂಟಿಲೇಟರ್‌ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‌ಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಲೋಪ, ಅಕ್ರಮಗಳ ಆರೋಪದ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು. ಆಯೋಗ ರಚನೆಯಾಗಿ ವರ್ಷದೊಳಗೆ ತನಿಖಾ ವರದಿ ಸಲ್ಲಿಕೆಯಾಗಿದ್ದು, ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ವರದಿ ಬಹಿರಂಗೊಳಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಆರೋಗ್ಯ ಇಲಾಖೆಯಿಂದಲೂ ವರದಿ ಸಲ್ಲಿಕೆ:
ಕೋವಿಡ್ ಹಗರಣಗಳ ಬಗ್ಗೆ ತನಿಖೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಹಣಕಾಸು ವಿಭಾಗವು ರಾಜ್ಯ ಸರ್ಕಾರಕ್ಕೆ 2023ರ ಜುಲೈ 5ರಂದೇ ವರದಿ ಸಲ್ಲಿಸಿತ್ತು. ಇದನ್ನೂ ಓದಿ: ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್ – ಕೋರಮಂಗಲ ಪೊಲೀಸರಿಂದ ಆರೋಪಿ ವಿರುದ್ಧ 1,200 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
ಬಿಜೆಪಿ ಅವಧಿಯಲ್ಲಿ ಕೋವಿಡ್ (COVID 19) ವೇಳೆ ಎಷ್ಟು ವೈದ್ಯಕೀಯ ಸಲಕರಣೆ ಖರೀದಿ ಆಗಿತ್ತು, ಯಾವೆಲ್ಲ ಔಷಧಿ ಖರೀದಿ ಮಾಡಿದ್ರು? ವಿಭಾಗವಾರು ಯಾವುದಕ್ಕೆ ಎಲ್ಲಾ ಹಣ ಖರ್ಚಾಗಿದೆ? ಏನೆಲ್ಲಾ ಖರೀದಿ ಆಗಿದೆ? ಎನ್.ಹೆಚ್.ಎಂ, ಅಡ್ಮಿನ್ ವಿಭಾಗ, ಇಂಜಿನಿಯರಿಂಗ್ ವಿಭಾಗ, ಐಸಿಯು, ವೆಂಟಿಲೇಟರ್ ಖರೀದಿ ಸೇರಿದಂತೆ ವಿಭಾಗವಾರು ಪ್ರತ್ಯೇಕ ಪ್ರತ್ಯೇಕ ಬಿಲ್ ಗಳನ್ನ ಒಳಗೊಂಡ ವರದಿಯನ್ನು ಸಲ್ಲಿಕೆ ಮಾಡಲಾಗಿತ್ತು.
ಇದೀಗ ಆಯೋಗದ ತನಿಖಾ ವರದಿ ಬಳಿಕ ಅಂದಿನ ಸಿಎಂ, ಆರೋಗ್ಯ ಸಚಿವರಿಗೆ ಬಿಸಿ ತಟ್ಟುತ್ತಾ? ಅನ್ನೋ ಪ್ರಶ್ನೆಯೂ ಎದ್ದಿದೆ. ಸರ್ಕಾರದ ಮುಂದಿನ ಕ್ರಮದ ಬಗ್ಗೆ ಕಾದುನೋಡಬೇಕಿದೆ. ಇದನ್ನೂ ಓದಿ: ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ನೀರಿನ ಒಳಹರಿವು – ಭರ್ತಿಗೆ ಕೇವಲ 10 ಟಿಎಂಸಿ ಬಾಕಿ