ನವದೆಹಲಿ: ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು ಎಂದು ಜನರಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಯಾವುದೇ ವ್ಯಕ್ತಿಯಲ್ಲಿ ಜ್ವರ, ಕೆಮ್ಮು, ತಲೆ ನೋವು , ಗಂಟಲು ನೋವು, ಉಸಿರಾಟ ಸಮಸ್ಯೆ, ಮೈಕೈ ನೋವು, ರುಚಿ ಅಥವಾ ವಾಸನೆ ಗ್ರಹಿಕೆ ಸಾಧ್ಯವಾಗದ ಲಕ್ಷಣಗಳಿದ್ದಲ್ಲಿ ಅಂಥವರನ್ನು ಶಂಕಿತ ಕೋವಿಡ್ ಸೋಂಕಿತರು ಎಂದು ಪರಿಗಣಿಸಬೇಕು. ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚನೆ ನೀಡಲಾಗಿದೆ.
Advertisement
Advertisement
ಅಲ್ಲದೆ ರಾಜ್ಯದ ವಿವಿಧೆಡೆ 24 ಗಂಟೆಯೂ ಕೋವಿಡ್ ಪರೀಕ್ಷಾ ಕೇಂದ್ರ ತೆರೆದಿರಬೇಕು. ವೈದ್ಯಕೀಯ ಸಿಬ್ಬಂದಿಯನ್ನು ಅಲ್ಲಿ ನಿಯೋಜಿಸಬೇಕು. ಮನೆಯಲ್ಲೇ ಕೋವಿಡ್ ಪರೀಕ್ಷೆ ಮಾಡುವ ಕಿಟ್ ಬಳಕೆಗೆ ಪ್ರೋತ್ಸಾಹ ನೀಡಬೇಕು ಎಂದು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು
Advertisement
Advertisement
ಭಾರತದಲ್ಲಿ ಕೋವಿಡ್‍ನ 2ನೇ ಅಲೆಗೆ ಕಾರಣವಾಗಿದ್ದ ಡೆಲ್ಟಾ ತಳಿಯ ಸ್ಥಾನವನ್ನು ಓಮಿಕ್ರಾನ್ ಆವರಿಸಲು ಆರಂಭಿಸಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.