ಬೆಂಗಳೂರು: ಕೋವಿಡ್-19 ಎರಡನೇ ಅಲೆ ಕೊಂಚ ತಗ್ಗಿದ್ದರೂ ಲಸಿಕೆ ಪಡೆಯುವುದು ಕಡ್ಡಾಯವಾಗಿದೆ. ಆದರೆ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಇದನ್ನು ಸರಿದೂಗಿಸಲು ಕೇಂದ್ರ ಸರ್ಕಾರದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ವ್ಯಾಕ್ಸಿನೇಷನ್ ಹೆಚ್ಚಿಸಲು ಹೊಸ ಯೋಜನೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಕೇಂದ್ರದ “ಹರ್ ಘರ್ ದಸ್ತಕ್” ಅಭಿಯಾನ ಅನುಷ್ಠಾನಗೊಳಸಲು ಎನ್‍ಹೆಚ್‍ಎಂ ಯೋಜನೆ ಮಾಡಿಕೊಂಡಿದೆ. ಇದನ್ನೂ ಓದಿ: ರಚಿತಾ ರಾಮ್ ಫಸ್ಟ್ ನೈಟ್ ಹೇಳಿಕೆಗೆ ಆಕ್ಷೇಪ: ಕ್ಷಮೆ ಕೇಳಲು ಆಗ್ರಹ
Advertisement
Advertisement
ಕೋವಿಡ್ ಲಸಿಕೆ ಮೊದಲನೇ ಮತ್ತು ಎರಡನೇ ಡೋಸ್ ವ್ಯಾಪ್ತಿ ವೃದ್ಧಿಸಲು ಸೂಚನೆ ನೀಡಲಾಗಿದ್ದು, ಮುಂಚೂಣಿ ಆರೋಗ್ಯ ಕಾರ್ಯಕರ್ತರು “ಹರ್ ಘರ್ ದಸ್ತಕ್” ಅಭಿಯಾನದಡಿ ಮನೆ ಮನೆ ಭೇಟಿ ಮಾಡಬೇಕು. ಮೊದಲನೇ ಡೋಸ್ ಪಡೆಯದ ಹಾಗೂ ಎರಡನೇ ಡೋಸ್‍ಗೆ ಬಾಕಿ ಇರುವ ಮಾಹಿತಿ ಪಡೆಯಬೇಕು. ಪ್ರತಿಯೊಬ್ಬ ಅರ್ಹ ವ್ಯಕ್ತಿಗೆ ನೀವು ಲಸಿಕೆ ಪಡೆದಿದ್ದೀರಾ ಎಂದು ಪ್ರಶ್ನಿಸಬೇಕು. ಕೋವಿಡ್-19 ಲಸಿಕೆ ಪಡೆಯಬೇಕಾದವರ ಪಟ್ಟಿ ಸಿದ್ಧಪಡಿಸಿಟ್ಟುಕೊಂಡು ಜಾಗೃತಿ ಮೂಡಿಸುವ ಕಾರ್ಯ ಮಾಡುವಂತೆ ಸೂಚನೆ ನೀಡಿದೆ.
Advertisement
ಕೋವಿಡ್‍ನಿಂದ ಸಂಪೂರ್ಣ ರಕ್ಷಣೆ ಹೊಂದಲು ಎರಡೂ ಡೋಸ್ ಲಸಿಕೆ ಪಡೆಯುವುದು ಅತ್ಯವಶ್ಯಕ. ಈ ಕುರಿತು ಮಾಹಿತಿಯನ್ನು ಜನರಿಗೆ ಮನದಟ್ಟು ಮಾಡುವುದು, ಅವರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಪ್ರಯತ್ನಿಸಬೇಕು. ಅದಕ್ಕಾಗಿ ತಾತ್ಕಾಲಿಕ ಲಸಿಕೆ ಕೇಂದ್ರ ತೆರಯುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ನನ್ನ ಜೀವನದಲ್ಲಿ ಒಂದು ತಪ್ಪು ನಡೆದಿದೆ ಅದನ್ನೇ ಇಟ್ಟುಕೊಂಡು ಪದೇ ಪದೇ ಟಾರ್ಗೆಟ್ ಮಾಡಬೇಡಿ: ನಲಪಾಡ್
Advertisement
ಹೆಚ್ಚು ಜನ ಸಂಚಾರವಿರುವ ಪ್ರದೇಶಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ ಮತ್ತು ಹಡಗು ನಿಲ್ದಾಣಗಳಲ್ಲಿ ಲಸಿಕಾಕರಣ ಕೇಂದ್ರಗಳನ್ನು ತಾತ್ಕಾಲಕವಾಗಿ ಸ್ಥಾಪಿಸಬಹದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಉನ್ನತ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳಲ್ಲಿ ಲಸಿಕಾಕರಣಕ್ಕಾಗಿ ಕ್ರಮ ಕೈಗೊಳ್ಳಬೇಕು. ಇದರಿಂದಾಗಿ ಲಸಿಕಾ ಅಭಿಯಾನ ಹೆಚ್ಚಾಗಲಿದೆ ಎಂದು ತಿಳಿಸಿದೆ.