Connect with us

Corona

ಬೆಳಕಿಗೆ ಬಂತು ಮತ್ತೊಂದು ಚೀನಾದ ಮಹಾ ಎಡವಟ್ಟು

Published

on

ನ್ಯೂಯಾರ್ಕ್: ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ ಆರಂಭದಲ್ಲೇ ಮಾಡಿದ ಮತ್ತೊಂದು ಎಡವಟ್ಟು ಈಗ ಬೆಳಕಿಗೆ ಬಂದಿದೆ.

ಹೌದು. ವ್ಯಕ್ತಿಯಿಂದ ವ್ಯಕ್ತಿಗೆ ಈ ವೈರಸ್ ಹರಡುತ್ತಿದೆ ಎನ್ನುವುದು ತಿಳಿದಿದ್ದರೂ ಚೀನಾ 6 ದಿನಗಳ ಕಾಲ ಈ ವಿಚಾರವನ್ನು ಮುಚ್ಚಿಟ್ಟಿತ್ತು ಎಂಬುದಾಗಿ ಎಎಫ್‍ಪಿ ವರದಿ ಮಾಡಿದೆ.

ಈ ಸಂಬಂಧ ಎಎಫ್‍ಪಿಗೆ ದಾಖಲೆಗಳು ಲಭ್ಯವಾಗಿದ್ದು, ವುಹಾನ್ ನಲ್ಲಿ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುತ್ತಿರುವ ವಿಚಾರ ಜ.14ರಂದೇ ಆರೋಗ್ಯ ಅಧಿಕಾರಿಗಳಿಗೆ ತಿಳಿದಿತ್ತು. ಆದರೆ ಅವರು ಈ ವಿಚಾರವನ್ನು ಮುಚ್ಚಿಟ್ಟಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಚೀನಾ, ಅಮೆರಿಕ ಸಂಶೋಧನೆಯಿಂದ ವುಹಾನ್ ಮಾರುಕಟ್ಟೆಗೆ ಬಂತು ಕೊರೊನಾ

ಈ ಮಧ್ಯೆ ವುಹಾನ್ ನಲ್ಲಿ ಔತಣಕೂಟವನ್ನು ಆಯೋಜನೆ ಆಗಿತ್ತು. ಈ ಔತಣಕೂಟದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಇದಾದ ಬಳಿಕ ನಡೆದ ಹೊಸ ವರ್ಷವಾದ ಲುನಾರ್ ಹಬ್ಬದಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ವಿಶ್ವದ ಹಲವು ದೇಶಗಳಿಂದ ಈ ಹಬ್ಬದಲ್ಲಿ ಪಾಲ್ಗೊಳ್ಳಲು ಪ್ರವಾಸಿಗರು ಆಗಮಿಸಿದ್ದರು. ಪರಿಣಾಮ ಜ.21ರ ಒಳಗಡೆ ಸೋಂಕು 3 ಸಾವಿರ ಮಂದಿಗೆ ಹರಡಿತು ಎಂದು ಹೇಳಿದೆ.

ಚೀನಾ ಈ ವಿಚಾರವನ್ನು ಮುಚ್ಚಿಟ್ಟ ಪರಿಣಾಮ ಸೋಂಕು ವಿಶ್ವದೆಲ್ಲೆಡೆ ಹರಡಿ ಲಕ್ಷಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಇದನ್ನೂ ಓದಿ: ವುಹಾನ್ ಮಾರುಕಟ್ಟೆಯ ಸೀಗಡಿ ಮಾರುತ್ತಿದ್ದ ಮಹಿಳೆ ಕೊರೊನಾ ‘ಝೀರೋ ಪೇಶೆಂಟ್’

ಆರಂಭದಲ್ಲೇ ಚೀನಾದ ಡಾ. ಲಿ ವೆನ್ಲಿಯಾಂಗ್ ಈ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ಸಾರ್ಸ್ ರೀತಿಯ ಹೊಸ ರೋಗ ಲಕ್ಷಣ ಹೊಂದಿರುವ 7 ಮಂದಿ ರೋಗಿಗಳನ್ನು ನಾನು ಗುರುತಿಸಿದ್ದೇನೆ. ಹೀಗಾಗಿ ಸುರಕ್ಷಾ ಸಾಧನಗಳನ್ನು ಬಳಸಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಈ ಜಾಗೃತಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಜನವರಿ 1 ರಂದು ಡಾ. ಲಿ ವೆನ್ಲಿಯಾಂಗ್ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಖಂಡಿಸಲಾಗಿತ್ತು. ವುಹಾನ್ ಮುನ್ಸಿಪಾಲ್ ಆರೋಗ್ಯ ಆಯೋಗ ಪ್ರಾಥಮಿಕ ತನಿಖೆಯಲ್ಲಿ ಮನುಷ್ಯರಿಂದ ಮನುಷ್ಯರಿಗೆ ಹರಡುವ ಬಗ್ಗೆ ಯಾವುದೇ ಪುರಾವೆಗಳು ಸಿಕ್ಕಿಲ್ಲ ಎಂದು ಹೇಳಿತ್ತು. ಇದನ್ನೂ ಓದಿ: ಚೀನಾ ಪರವಾಗಿರುವ WHOಗೆ ಫಂಡ್ ನೀಡಲ್ಲ -ಟ್ರಂಪ್

ಚೀನಾದ ಹೇಳಿಕೆಯನ್ನು ಜನವರಿ 14ರಂದು ವಿಶ್ವ ಆರೋಗ್ಯ ಸಂಸ್ಥೆ ಕೂಡಾ ಸಮರ್ಥಿಸಿಕೊಂಡು ಪ್ರಾಥಮಿಕ ತನಿಖೆಯಲ್ಲಿ ಈ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತಿರುವ ಬಗ್ಗೆ ಯಾವುದೇ ದಾಖಲೆ ಸಿಕ್ಕಿಲ್ಲ ಎಂದು ಟ್ವೀಟ್ ಮಾಡಿತ್ತು. ಇದಾದ ಬಳಿಕ ಫೆ.6 ರಂದು ಕೊರೊನಾ ವೈರಸ್ ಬಗ್ಗೆ ಮೊದಲ ಬಾರಿಗೆ ಎಚ್ಚರಿಕೆ ನೀಡಿದ್ದ ವೈದ್ಯ ಲಿ ವೆನ್ಲಿಯಾಂಗ್ ಮೃತಪಟ್ಟಿದ್ದರು. ಇದನ್ನೂ ಓದಿ: ವುಹಾನ್‍ನಲ್ಲಿ ಕೊರೊನಾ ತಡೆಗಟ್ಟಲು ಬೆಂಗ್ಳೂರಿನ ಕಂಪನಿಯ ಸಹಾಯ ಪಡೆದ ಚೀನಾ

Click to comment

Leave a Reply

Your email address will not be published. Required fields are marked *