Connect with us

Bengaluru City

5 ರಾಜ್ಯಗಳಿಂದ 15 ದಿನ ಯಾರೂ ಕರ್ನಾಟಕಕ್ಕೆ ಬರುವಂತಿಲ್ಲ

Published

on

ಬೆಂಗಳೂರು: ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಮಧ್ಯಪ್ರದೇಶ, ರಾಜಸ್ಥಾನ ರಾಜ್ಯದಿಂದ ಬರುವ ವ್ಯಕ್ತಿಗಳಿಗೆ ಇನ್ನು ಮುಂದೆ ಕರ್ನಾಟಕಕ್ಕೆ ಪ್ರವೇಶ ನೀಡದಿರಲು ಸರ್ಕಾರ ಮುಂದಾಗಿದೆ.

ಈ ರಾಜ್ಯಗಳಿಂದ ಬಂದಿರುವ ವ್ಯಕ್ತಿಗಳಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಕ್ಯಾಬಿನೆಟ್ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ಮಾಧುಸ್ವಾಮಿ, ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಐದು ರಾಜ್ಯಗಳಿಂದ ಬರುವ ವ್ಯಕ್ತಿಗಳಿಗೆ 15 ದಿನಗಳ ಕಾಲ ರಾಜ್ಯ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ. ರಸ್ತೆ, ರೈಲು ಮಾರ್ಗದ ಮೂಲಕ ಬರುವಂತಿಲ್ಲ. ಅಷ್ಟೇ ಅಲ್ಲದೇ ಈ ರಾಜ್ಯಕ್ಕೆ ವಿಮಾನ ಸೇವೆ ಸಹ ನೀಡದೇ ಇರಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 5 ರಾಜ್ಯದ ಪ್ರಜೆಗಳಿಗೆ ನಿರ್ಬಂಧ – ಸಚಿವ ಮಾಧುಸ್ವಾಮಿ ಎಡವಟ್ಟು, ಸರ್ಕಾರಕ್ಕೆ ಇಕ್ಕಟ್ಟು- ಸಿಎಂ ಸ್ಪಷ್ಟನೆ

ಈ ವೇಳೆ ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರಗಳಲ್ಲಿ 18 ಕೋಟಿ ವೆಚ್ಚದಲ್ಲಿ ಔಷಧಿ ಉಗ್ರಾಣ ಸ್ಥಾಪನೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.