ಚಾಮರಾಜನಗರ: ಭರಚುಕ್ಕಿ ಜಲಪಾತದಲ್ಲಿ ಹಸು ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.
ಭರಚುಕ್ಕಿ ಜಲಪಾತದ ಬಳಿ ಹಸು ನೀರು ಕುಡಿಯಲು ತೆರಳಿತ್ತು. ನೀರಿನ ರಭಸದಲ್ಲಿ ಸಿಲುಕಿದ ಹಸು ಮೇಲಕ್ಕೆ ಬರಲಾರದೇ ನದಿಯ ಮಧ್ಯ ಭಾಗದಲ್ಲಿ ನಿಂತುಕೊಂಡಿತ್ತು. ಹಸು ತನ್ನ ಪ್ರಾಣ ರಕ್ಷಿಸಿಕೊಳ್ಳಲು ಸತತ ಎರಡು ಗಂಟೆಗಳ ಕಾಲ ಪ್ರಯತ್ನ ನಡೆಸಿದೆ. ಕೊನೆಗೆ ನೀರಿನ ರಭಸ ಹೆಚ್ಚಾಗಿದ್ದರಿಂದ ಜಲಪಾತದಲ್ಲಿ ಕೊಚ್ಚಿ ಹೋಗಿದೆ. ಈ ಎಲ್ಲ ದೃಶ್ಯಗಳು ಪ್ರವಾಸಿಗರ ಮೊಬೈಲ್‍ನಲ್ಲಿ ಸೆರೆಯಾಗಿದ್ದು, ನೀರಿನ ರಭಸ ಹೆಚ್ಚಾಗಿದ್ದರಿಂದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪ್ರವಾಸಿಗರು ಅಸಹಾಯಕರಾಗಿದ್ದರು.
ಕಬಿನಿ ಹಾಗೂ ಕೆಆರ್ ಎಸ್ ಜಲಾಶಯಗಳಿಂದ ಅಧಿಕ ನೀರು ಹರಿಸಿರುವ ಹಿನ್ನೆಲೆಯಲ್ಲಿ ನದಿ ಅಪಾಯ ಮಟ್ಟಿ ಮೀರಿ ಹರಿಯುತ್ತಿವೆ. ಕಬಿನಿ ಜಲಾಶಯದಿಂದ 80 ಸಾವಿರ ಕ್ಯೂಸೆಕ್ ನೀರು ಹೊರ ನೀಡುತ್ತಿರುವ ಕಾರಣ ಎಲ್ಲೆಡೆ ಜಲಪ್ರವಾಹ ಉಂಟಾಗಿದೆ. ಕೇರಳ, ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಮೇಲೆ ಕಪಿಲಾ ನದಿ ಉಕ್ಕಿ ಹರಿಯುತ್ತಿದೆ. ಕಳೆದ ಮೂರು ದಿನಗಳಿಂದ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತವಾಗಿದೆ. ಹೆದ್ದಾರಿ ಸಂಪರ್ಕ ಕಡಿತದಿಂದ ವಾಹನ ಸವಾರರ ಪರದಾಡುತ್ತಿದ್ದಾರೆ.
ಹೊಳೆ ದಾಟುವಾಗ ಆಕಸ್ಮಿಕವಾಗಿ ವೃದ್ಧ ನೀರಲ್ಲಿ ಕೊಚ್ಚಿಕೊಂಡು ಹೋಗಿರುವಂತ ಘಟನೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಮರೋಡಿಯಲ್ಲಿ ನಡೆದಿದೆ. ಬೊಮ್ಮಯ್ಯ ದಾಸ್ ನೀರಲ್ಲಿ ವೃದ್ಧ ಕೊಚ್ಚಿಹೋಗಿದ್ದು, ವೃದ್ಧನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews