ಮಡಿಕೇರಿ: ಅಕ್ರಮವಾಗಿ ಗೋಸಾಗಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಬಂಧಿಸಿದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬೆಸ್ಗೂರು ಗ್ರಾಮದಲ್ಲಿ ನಡೆದಿದೆ.
ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಜಯರಾಂ ಹಾಗು ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ಮಾಡಿ, ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಕರುಗಳನ್ನು ರಕ್ಷಿಸಿದ್ದಾರೆ. ಇಂದು ಬೆಳಗ್ಗಿನ ಜಾವ ಎರಡೂವರೆ ಗಂಟೆಗೆ ಕರುಗಳನ್ನು ಸಾಗಿಸುತ್ತಿದ್ದ, ಪೊನ್ನಂಪೇಟೆಯ ಶಂಶುದ್ದೀನ್ ಅವರ ಪಿಕಪ್ ವಾಹನ ಹಾಗೂ ಐ ಕಿರಣ್ ಅವರ ಮಾರುತಿ ವ್ಯಾನ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಅವಾಂತರ – 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಕ್ರೇನ್
Advertisement
Advertisement
ಪೊನ್ನಂಪೇಟೆ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಕೂಡ ಅಕ್ರಮವಾಗಿ ಗೋಸಾಗಟ ನಡೆದಿದ್ದು, ಪೊನ್ನಂಪೇಟೆ ಠಾಣಾಧಿಕಾರಿಗಳಿಗೆ ಸಾರ್ವಜನಿಕರು ಮಾಹಿತಿ ನೀಡಿಯೂ ಈವರೆಗೆ ಕ್ರಮ ಕೈಗೊಳ್ಳದ ಹಿನ್ನೆಲೆ ಸಾರ್ವಜನಿಕರು ಈ ಬಾರಿ ನೇರವಾಗಿ ಗೋಣಿಕೊಪ್ಪಲು ವೃತ್ತ ನಿರೀಕ್ಷಕರಿಗೆ ಮಾಹಿತಿ ನೀಡಿದ್ದರು. ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಅಗಿದೆ.