ಬೆಂಗಳೂರು: ಇಲ್ಲಿನ ಚಾಮರಾಜಪೇಟೆಯಲ್ಲಿ (Chamarajpet) ಹಸುಗಳ ಕೆಚ್ಚಲು (Cows Udder) ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಾಟನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬಂಧಿಸಿ ಸ್ಥಳ ಮಹಜರು ನಡೆಸಿರುವ ಸೋಕೋ ಟೀಂ ತಡರಾತ್ರಿಯಿಂದಲೇ ವಿಚಾರಣೆ ಆರಂಭಿಸಿದೆ. ಇದನ್ನೂ ಓದಿ: ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ: ಜಮೀರ್
ಏನಿದು ಅಮಾನವೀಯ ಪ್ರಕರಣ?
ಬೀದಿಯಲ್ಲಿ ಮಲಗಿದ್ದ 3 ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಚಾಮರಾಜಪೇಟೆಯಲ್ಲಿ ಭಾನುವಾರ ನಡೆದಿದೆ. ವಿನಾಯಕ ನಗರದಲ್ಲಿ ತಡರಾತ್ರಿ ಕರ್ಣ ಎಂಬುವರಿಗೆ ಸೇರಿದ್ದ 3 ಹಸುಗಳ ಕೆಚ್ಚಲು ಕೊಯ್ದ ರಕ್ತದ ಕೋಡಿಯನ್ನೇ ಹರಿಸಿದ್ದರು. ಸದ್ಯ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕಾಟನ್ ಪೇಟೆ ಪೊಲೀಸರು ತನಿಖೆ ಆರಂಭಿಸಿದ್ದರು. ಇದನ್ನೂ ಓದಿ: ಹಸುಗಳನ್ನು ಹೋರಾಟಕ್ಕೆ ಕರೆದುಕೊಂಡು ಹೋಗಿದ್ದಕ್ಕೆ ಕೆಚ್ಚಲಿಗೆ ಕತ್ತರಿ!
ಇನ್ನೂ ಈ ಪ್ರಕರಣದಲ್ಲೂ ರಾಜಕೀಯ ಕೆಸರೆರಚಾಟಕ್ಕೆ ಶುರುವಾಗಿದೆ. ಘಟನೆ ಬೆಳಕಿಗೆ ಬರ್ತಿದ್ದಂತೆ ಬಿಜೆಪಿ ನಾಯಕರು ಸ್ಥಳಕ್ಕೆ ಭೇಟಿ ಕೊಟ್ರು.. ಸ್ಥಳೀಯ ಸಂಸದ ಪಿಸಿ ಮೋಹನ್ ಸ್ಥಳ ಪರಿಶೀಲಿಸಿ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು. ವಿಪಕ್ಷ ನಾಯಕ ಅಶೋಕ್ ಕೂಡ ಸ್ಥಳಕ್ಕಾಗಮಿಸಿ, ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಸಂಕ್ರಾಂತಿಗೆ ಹಸುವಿನ ಕೆಚ್ಚಲು ಕೊಯ್ದಿರೋ ಗಿಫ್ಟ್ ಕೊಟ್ಟಿದ್ದಾರೆ. ಇದು ಜಿಹಾದಿ ಮನಸ್ಥಿತಿ, ಹಾಲು ಕೊಡುವ ಕೆಚ್ಚಲು ಕೊಯ್ದಿದ್ದಾರೆ ಎಂದು ಕಿಡಿಕಾರಿದ್ರು.
ಈ ವೇಳೆ ವೈಯಕ್ತಿಕವಾಗಿ 1 ಲಕ್ಷ ಪರಿಹಾರವನ್ನೂ ಘೋಷಿಸಿದ್ರು. ಇತ್ತ, ಹಿಂದೂ ಮುಖಂಡರೂ ಘಟನೆಯನ್ನು ಉಗ್ರವಾಗಿ ಖಂಡಿಸಿದ್ದಾರೆ. ಘಟನೆಯನ್ನು ಸಿಎಂ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತೆ ಅಂದಿದ್ದಾರೆ. ಸ್ಥಳೀಯ ಶಾಸಕರೂ ಆಗಿರುವ ಸಚಿವ ಜಮೀರ್, ಕಾಟನ್‌ಪೇಟೆ ಪಶುವೈದ್ಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತೆ. 3 ಹೊಸ ಹಸುಗಳನ್ನು ನಾನೇ ಕೊಡಿಸ್ತೀನಿ ಅಂದಿದ್ದಾರೆ. ಇದನ್ನೂ ಓದಿ: ಛೇ ಇದೆಂತಾ ವಿಕೃತಿ! – ಹಸುಗಳ ಕೆಚ್ಚಲು ಕೊಯ್ದ ದುರುಳರು