ಜೈಪುರ: ರಾಜಸ್ಥಾನದಲ್ಲಿ ಈಗ ಗೋಮೂತ್ರದ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಆದಾಯದ ಮೂಲವಾಗಿ ಪರಿವರ್ತನೆಯಾಗಿದೆ.
ರಾಜಸ್ಥಾನದ ರೈತರು ಗಿರ್ ಮತ್ತು ತಾಪಾರ್ಕರ್ ಎಂಬ ಪ್ರಮುಖವಾದ ತಳಿಯ ಗೋಮೂತ್ರವನ್ನು ಮಾರುಕಟ್ಟೆಗಳಲ್ಲಿ ಪ್ರತಿ ಲೀಟರ್ ಗೆ 15 ರೂ. ನಿಂದ 30 ರೂ. ನಂತೆ ಮಾರಾಟ ಮಾಡುತ್ತಿದ್ದರೆ, ಹಾಲನ್ನು 22 ರೂ. ನಿಂದ 25 ರೂ ವರೆಗೆ ಮಾರಾಟ ಮಾಡುತ್ತಿದ್ದಾರೆ.
Advertisement
2 ವರ್ಷಗಳಿಂದ ಹೈನುಗಾರಿಕೆಯಲ್ಲಿ ತೊಡಗಿರುವ ಜೈಪುರದ ಕೈಲೇಶ್ ಗುಜ್ಜರ್ ಪ್ರತಿಕ್ರಿಯಿಸಿ, ಗೋಮೂತ್ರ ಮಾರಾಟದಿಂದಾಗಿ ನನ್ನ ಆದಾಯ 30% ಹೆಚ್ಚಾಗಿದೆ. ಮಾರಾಟದಿಂದಾಗಿ ಈಗ ನನಗೆ ಅದೃಷ್ಟ ಬಂದಿದ್ದು, ಗೋಮೂತ್ರ ಸಂಗ್ರಹಿಸಲು ರಾತ್ರಿಯಿಡಿ ಹಸುವಿನ ಕೊಟ್ಟಿಗೆಯಲ್ಲೇ ಎಚ್ಚರವಾಗಿರಬೇಕಾಗುತ್ತದೆ. ದನ ನಮ್ಮ ತಾಯಿ, ಹಾಗಾಗಿ ರಾತ್ರಿಯಿಡಿ ಗೋಮೂತ್ರಕ್ಕಾಗಿ ಕೊಟ್ಟಿಗೆಯಲ್ಲಿ ಕಾಯುವುದು ನನಗೆ ಬೇಸರವಾಗುವುದಿಲ್ಲ ಎಂದು ಹೇಳಿದ್ದಾರೆ.
Advertisement
ಓಂ ಪ್ರಕಾಶ್ ಮೀನಾ ಪ್ರತಿಕ್ರಿಯಿಸಿ, ಗಿರ್ ತಳಿಯ ಹಸುವಿನ ಮೂತ್ರವನ್ನು ನಾನು ಮಾರಾಟ ಮಾಡುತ್ತಿದ್ದೇನೆ. ಲೀಟರ್ ಒಂದಕ್ಕೆ 30 ರಿಂದ 50 ರೂಪಾಯಿ ಸಿಗುತ್ತಿದೆ ಎಂದು ಹೇಳಿದರು. ಇದನ್ನು ಓದಿ: ಗೋ ಮೂತ್ರದಿಂದ ಕ್ಯಾನ್ಸರ್ ಗುಣಪಡಿಸಬಹುದು!
Advertisement
ಬೇಡಿಕೆ ಯಾಕೆ?
ಗೋಮೂತ್ರವನ್ನು ಹೆಚ್ಚಾಗಿ ರೈತರು ತಮ್ಮ ಕೃಷಿಯನ್ನು ಹಾಳು ಮಾಡುವ ಕೀಟಗಳನ್ನು ತಡೆಗಟ್ಟಲು ಬೆಳೆಗಳ ಮೇಲೆ ಸಿಂಪಡಿಸುತ್ತಾರೆ. ಅಷ್ಟೇ ಅಲ್ಲದೇ ಯಜ್ಞ, ಪಂಚಗವ್ಯಗಳಲ್ಲಿ ಮತ್ತು ಧಾರ್ಮಿಕ ಆಚರಣೆ ಕಾರ್ಯಕ್ರಮಗಳಲ್ಲಿ ಬಳಸುವುದರಿಂದ ಬೇಡಿಕೆ ಹೆಚ್ಚಾಗಿದೆ.
Advertisement
ಉದಯಪುರದ ಸರ್ಕಾರಿ ಮಹಾರಾಣಾ ಪ್ರತಾಪ್ ಕೃಷಿ ವಿಶ್ವವಿದ್ಯಾಲಯ, ಜೈವಿಕ ಕೃಷಿ ಯೋಜನೆಗಾಗಿ ಪ್ರತಿ ತಿಂಗಳಿಗೂ 300 ರಿಂದ 500 ಲೀಟರ್ ನಷ್ಟು ಗೋಮೂತ್ರವನ್ನು ಬಳಸುತ್ತದೆ. ಪ್ರತಿ ತಿಂಗಳು 15,000-20,000 ರೂಪಾಯಿಯ ಮೌಲ್ಯದಷ್ಟು ಗೋಮೂತ್ರವನ್ನು ಖರೀದಿಸುತ್ತದೆ ಎಂದು ಉಪಕುಲಪತಿ ಉಮಾ ಶಂಕರ್ ಹೇಳಿದ್ದಾರೆ.