ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ಸಾಕಿ ಬೆಳೆಸಿದ ಜಾನುವಾರುಗಳನ್ನ ಸ್ವತಃ ಗ್ರಾಮಸ್ಥರೇ ಜೀವಂತ ಸಮಾಧಿ ಮಾಡಿದ ಘಟನೆ ನಡೆದಿದೆ.
ಹುಚ್ಚು ನಾಯಿ ಕಡಿತಕ್ಕೊಳಗಾದ ಗ್ರಾಮದ ಸುಮಾರು 10 ರಾಸುಗಳು ಬುದ್ಧಿ ಸ್ವಾಧೀನ ಕಳೆದುಕೊಂಡಿದ್ದವು. ಹುಚ್ಚು ನಾಯಿ ಗ್ರಾಮದ ಜನ ಹಾಗೂ ದನಗಳ ಮೇಲೆ ದಾಳಿ ಮಾಡುತ್ತಿದ್ದವು. ಕೆಲ ದಿನಗಳಿಂದ ಹುಚ್ಚು ನಾಯಿಗಳ ಕಡಿತಕ್ಕೆ ಎಮ್ಮೆಯೊಂದು ಆಕಳುಗಳ ಮೇಲೆ ದಾಳಿ ಮಾಡಿತ್ತು. ಜೀವ ಭಯದಿಂದ ಗ್ರಾಮಸ್ಥರು ಜೆಸಿಬಿ ಮೂಲಕ ಪ್ರಾಣಿಗಳ ಜೀವಂತ ಸಮಾಧಿ ಮಾಡಿದ್ದಾರೆ.
Advertisement
ಕೆಲವು ಜಾನುವಾರುಗಳು ಅನಾರೋಗ್ಯದಿಂದ ಸಾವನ್ನಪ್ಪಿವೆ. ಪಶುವೈದ್ಯರಿಗೆ ಮಾಹಿತಿ ನೀಡಿದರೂ ಸರಿಯಾದ ಸಮಯಕ್ಕೆ ಔಷಧಿ ವಿತರಣೆ ಮಾಡದ ಹಿನ್ನೆಲೆಯಲ್ಲಿ ಪಶು ಇಲಾಖೆ ಅಧಿಕಾರಿಗಳ ಹಾಗೂ ವೈದ್ಯರ ನಿಷ್ಕಾಳಜಿಯಿಂದ ಚಿಕಿತ್ಸೆ ಸಿಗದೆ ಪ್ರಾಣಿಗಳು ಸ್ವಾಧೀನ ಕಳೆದುಕೊಂಡು ದಾಳಿಮಾಡುತ್ತಿದ್ದವು.
Advertisement
ಹೀಗಾಗಿ ಬೇರೆದಾರಿಯಿಲ್ಲದೆ ಗ್ರಾಮಸ್ಥರೇ ನಾಲ್ಕೈದು ಜಾನುವಾರುಗಳನ್ನು ಜೀವಂತ ಸಮಾಧಿ ಮಾಡಿದ್ದಾರೆ. ಜೊತೆಗೆ ಚಿಕಿತ್ಸೆ ನೀಡದ ಪಶು ವೈಧ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.