ರಾಮನಗರ: ಬಿಜೆಪಿ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ (CP Yogeshwar) ಅವರ ಬಾವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಮುರುಗನ್ ಎಂಬಾತನನ್ನು ಪೊಲೀಸರು ತಮಿಳುನಾಡಿನಲ್ಲಿ (TamilNadu) ಬಂಧಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಹದೇವಯ್ಯ (Mahadevaiah) ಅವರ ಪಕ್ಕದ ತೋಟದಲ್ಲಿಯೇ ಕೂಲಿ ಕೆಲಸ ಮಾಡ್ತಿದ್ದ ಮುರುಗನ್. ಮಹದೇವಯ್ಯ ಬಳಿ ಹಣ ಇರೋದನ್ನ ಗಮನಿಸಿದ್ದ. ಹಣಕ್ಕಾಗಿ ಕುಟುಂಬಸ್ಥರ ಜೊತೆ ಸೇರಿ ಮಹದೇವಯ್ಯ ಹತ್ಯೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿತು. ಹಣದ ಅವಶ್ಯಕತೆಯಿದ್ದುದರಿಂದ ಇತರರೊಂದಿಗೆ ಸೇರಿ ಮಹದೇವಯ್ಯನನ್ನ ಹತ್ಯೆ ಮಾಡಿರುವುದು ನಂತರ ಗೊತ್ತಾಗಿದೆ. ಇದೀಗ ಆರೋಪಿ ಮುರುಗನ್‌ನನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
- Advertisement
ನಡೆದಿದ್ದೇನು..?:
ಡಿಸೆಂಬರ್ 1ರ ರಾತ್ರಿ ಮಹದೇವಯ್ಯ ಅವರು ಚನ್ನಪಟ್ಟಣ ತೋಟದ ಮನೆಯಲ್ಲಿದ್ದರು. ಮಧ್ಯರಾತ್ರಿ 12 ಗಂಟೆಗೆ ತೋಟದ ಮನೆಗೆ ನುಗ್ಗಿದ ಮೂವರು ಅಪರಿಚಿತರು, ಬಳಿಕ ಮನೆಯಲ್ಲಿ ಲಾಕರ್ ಓಪನ್ ಮಾಡಿಸಿ ಪತ್ರ ದುಡ್ಡು ಕೊಂಡೊಯ್ದಿರುವ ಶಂಕೆ ವ್ಯಕ್ತವಾಗಿತ್ತು. ಇದನ್ನೂ ಓದಿ: ಕೈ ಜಿಲ್ಲಾಧ್ಯಕ್ಷನ ಮೇಲೆ 50 ಲಕ್ಷ ವಂಚನೆ ಆರೋಪ- ನ್ಯಾಯ ಸಿಗದಿದ್ರೆ ಆತ್ಮಹತ್ಯೆಯ ಎಚ್ಚರಿಕೆ
- Advertisement
ಹಂತಕರು ಮಹದೇವಯ್ಯ ಅವರನ್ನು ಕಾರಿನಲ್ಲೇ ಕರೆದುಕೊಂಡು ಚನ್ನಪಟ್ಟಣದಿಂದ ಚಾಮರಾಜನಗರ ಜಿಲ್ಲೆಗೆ ಬಂದಿದ್ದು, ಬಳಿಕ ಕೊಳ್ಳೇಗಾಲದ ಬಳಿ ಹಂತಕರು ಡಾಬಾದಲ್ಲಿ ಪಾರ್ಟಿ ಮಾಡಿ ನಂತರ ಅದೇ ಮಾರ್ಗದ ಅಂಗಡಿಯಲ್ಲಿ ನೀರಿನ ಬಾಟ್ಲಿ ಖರೀದಿ ಮಾಡಿರುವ ಅನುಮಾನ ಹುಟ್ಟಿತ್ತು. ಇದಾದ ಬಳಿಕ ಹನೂರು ತಾಲೂಕಿ ನಾಲಾರೋಡ್ ಬಳಿಗೆ ಬಂದು ಕೊಲೆ ಮಾಡಿ ಅರಣ್ಯ ಪ್ರದೇಶದಲ್ಲಿ ಬಿಸಾಕಿ, ಬೆಳಗ್ಗೆ 5 ಗಂಟೆಗೆ ಹನೂರಿನ ರಾಮಾಪುರದಲ್ಲಿ ಕಾರು ನಿಲ್ಲಿಸಿರುವ ಹಂತಕರು, ಡಿ.2ರ ಬೆಳಗ್ಗೆ 5.15ಕ್ಕೆ ರಾಮಾಪುರದ ಮುಖ್ಯರಸ್ತೆಯಲ್ಲಿ ಟೀ ಕುಡಿದು ಹೋಗಿರುವ ಶಂಕೆ ವ್ಯಕ್ತವಾಗಿತ್ತು. ಇದನ್ನೂ ಓದಿ: ದಶಪಥ ಹೆದ್ದಾರಿಯಲ್ಲಿ ನಿರ್ಮಾಣವಾಗದ ಸ್ಕೈವಾಕ್ – ಜೀವ ಭಯದಲ್ಲಿ ರಸ್ತೆ ದಾಟುವ ಸಾರ್ವಜನಿಕರು
ಪ್ರಕರಣ ಕುರಿತು ಎಲ್ಲಾ ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿ ತನಿಖೆ ನಡೆಸುತ್ತಿದ್ದರು. ಇದಾದ ಕೆಲ ದಿನಗಳಲ್ಲಿ ತಮಿಳುನಾಡಿನ ಗಡಿ ಭಾಗದಲ್ಲಿ ಮಹದೇವಯ್ಯ ಶವ ಪತ್ತೆಯಾಗಿತ್ತು. ಮಹದೇವಯ್ಯ ಅವರನ್ನು ಹತ್ಯೆ ಮಾಡಿದ್ದ ಹಂತಕರು ಶವವನ್ನು ಚಾಮರಾಜನಗರ-ತಮಿಳುನಾಡು ಗಡಿ ಭಾಗದ ಅರಣ್ಯ ಪ್ರದೇಶದ ಒಳಗೆ ಬಿಸಾಕಿದ್ದರು. ಇದನ್ನೂ ಓದಿ: ಸಿಪಿವೈ ಬಾವ ನಾಪತ್ತೆ ಪ್ರಕರಣ – ಕಾರು ಪತ್ತೆ, ಕಿಡ್ನ್ಯಾಪ್ ಶಂಕೆಗೆ ಪುಷ್ಠಿ ನೀಡಿದ ರಕ್ತದ ಕಲೆ!
ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಹದೇವಯ್ಯ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಬೆಂಗಳೂರಿನ ಗಿರಿನಗರದಲ್ಲಿ ವಾಸವಿದ್ದ ಮಹದೇವಯ್ಯ ಬೆಂಗಳೂರಿನ (Bengaluru) ಮನೆ ರಿಪೇರಿ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಚನ್ನಪಟ್ಟಣ ತಾಲೂಕಿನ ವಡ್ಡರದೊಡ್ಡಿ ಗ್ರಾಮದ ತೋಟದ ಮನೆಯಲ್ಲಿ ವಾಸವಾಗಿದ್ದರು. ಮೆಗಾ ಸಿಟಿ ಡೆವಲಪರ್ಸ್ ನಿರ್ದೇಶಕರಾಗಿದ್ದ ಇವರು ಸಿ.ಪಿ.ಯೋಗೇಶ್ವರ್ ಅವರ ಕೆಲ ಕಂದಾಯದ ವಿಚಾರಗಳನ್ನೂ ನೋಡಿಕೊಳ್ಳುತ್ತಿದ್ದರು. ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮಿ ಆಗಿದ್ದರಿಂದ ಸಾಕಷ್ಟು ಭೂ ವಿವಾದ, ವ್ಯಾಜ್ಯಗಳು ಕೋರ್ಟ್ನಲ್ಲಿ ಇದ್ದವು ಎನ್ನಲಾಗಿದೆ. ಕೋಟ್ಯಂತರ ರೂ. ಬೆಲೆ ಬಾಳುವ ಭೂಮಿಯೊಂದರ ಪ್ರಮುಖ ದಾಖಲೆಗಳು ಮಹದೇವಯ್ಯ ಬಳಿ ಇದ್ದಿದ್ದರಿಂದ ಯಾರೋ ಸುಪಾರಿ ಕೊಟ್ಟು ಮಹದೇವಯ್ಯ ಅವರ ಕೊಲೆ ಮಾಡಿಸಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿತ್ತು.