ಚನ್ನಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಯೋಗೇಶ್ವರ್‌ ಕಣಕ್ಕೆ

Public TV
1 Min Read
CP Yogeshwara

ಬೆಂಗಳೂರು: ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.

ಕೊನೆ ಕ್ಷಣದವರೆಗೂ ಟಿಕೆಟ್‌ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಿಪಿವೈಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ.

 

ಇಂದು ಸಂಜೆ 4 ಗಂಟೆಗೆ ಬಿಜೆಪಿ ಪರಿಷತ್‌ ಸದಸ್ಯತ್ವಕ್ಕೆ ಸಿಪಿವೈ ರಾಜೀನಾಮೆ ನೀಡಲಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯಲ್ಲಿರುವ ಸಭಾಪತಿ ಹೊರಟ್ಟಿ ಭೇಟಿಗಾಗಿ ಸಿಪಿವೈ ತೆರಳಿದ್ದಾರೆ. ಅಷ್ಟೇ ಅಲ್ಲದೇ ನಾಮಪತ್ರ ಸಲ್ಲಿಕೆಗೆ ವಕೀಲರನ್ನು ಯೋಗೇಶ್ವರ್‌ ಸಂಪರ್ಕಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಮಾಸ್‌ ರೇಪಿಸ್ಟ್‌ ಎಂದ ರಾಹುಲ್‌ಗೆ ರಿಲೀಫ್‌ – ಅರ್ಜಿ ವಜಾ, 25 ಸಾವಿರ ದಂಡ

ಇಂದು ಬೆಳಗ್ಗೆ ಮಾತನಾಡಿದ್ದ ಯೋಗೇಶ್ವರ್‌, ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ನೀಡಿದ್ದ ಆಫರ್‌ ಅನ್ನು ನಾನು ತಿರಸ್ಕರಿಸಿದ್ದೇನೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದರು.

Share This Article