ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆಗೆ ಬಯಸಿದ್ರಾ ನಟ ದರ್ಶನ್? – ಕಾಂಗ್ರೆಸ್‌ ಅಚ್ಚರಿ ಅಭ್ಯರ್ಥಿ ಜೈಲುಪಾಲಾಗಿದ್ದಾರೆ ಎಂದ ಸಿಪಿವೈ

Public TV
1 Min Read
cp yogeshwar

ರಾಮನಗರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನವಾಗಿರುವ ನಟ ದರ್ಶನ್ (Actor Darshan), ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆಗೆ ಬಯಸಿದ್ರಾ ಅನ್ನೋ ಬಗ್ಗೆ ಮಾಜಿ ಸಚಿವ ಸಿ.ಪಿ ಯೋಗೇಶ್ವರ್‌ ಸುಳಿವು ಕೊಟ್ಟಿದ್ದಾರೆ. ದರ್ಶನ್‌ ಅವರನ್ನ ಕಾಂಗ್ರೆಸ್‌ನಿಂದ ನಿಲ್ಲಿಸಲು ಡಿಕೆ ಬ್ರದರ್ಸ್‌ ಸಿದ್ಧತೆ ನಡೆಸಿದ್ದರು ಎಂದು ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwara) ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿ ಹಾಕ್ತೇವೆ ಎಂದಿದ್ದ ಡಿ.ಕೆ ಸುರೇಶ್ (DK Syu ಹೇಳಿಕೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ನವರ ಅಚ್ಚರಿ ಅಭ್ಯರ್ಥಿ ಇದೀಗ ಜೈಲುಪಾಲಾಗಿದ್ದಾರೆ. ಚಿತ್ರನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ದರು. ಅವರನ್ನ ಕಾಂಗ್ರೆಸ್‌ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಡಿ.ಕೆ ಬ್ರದರ್ಸ್ ಪ್ಲ್ಯಾನ್‌ ಮಾಡಿದ್ದರು. ಆ ವ್ಯಕ್ತಿ ಯಾರು ಅಂತ ನೀವೆ ಊಹೆ ಮಾಡಿಕೊಳ್ಳಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ದರ್ಶನ್‌‌ ಸ್ಪರ್ಧೆಗೆ ಬಯಸಿದ್ದರು ಅನ್ನೋ ಸುಳಿವು ಬಿಟ್ಟುಕೊಟ್ಟಿದ್ದಾರೆ. ಇದನ್ನೂ ಓದಿ: ಚರಂಡಿಗೆ ಬೇಡ, ಸ್ವಾಮಿ ಮನೆಯವರಿಗಾದ್ರೂ ಶವ ಸಿಕ್ಕಲಿ ಎಂದಿದ್ದ ಆರೋಪಿ ಕಾರ್ತಿಕ್!

ದರ್ಶನ್ ಮೇಲೆ ಕೊಲೆ ಆರೋಪ ಕುರಿತು ಮಾತನಾಡಿ, ಈ‌ ವಿಚಾರವನ್ನ ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದೊಂದು ವಿಚಿತ್ರ ಕೇಸ್ ಅನ್ನಿಸ್ತಿದೆ. ಪಾಪ ಅವರಿಗೆ ರಾಜಕೀಯಕ್ಕೆ ಬರಬೇಕು ಅಂತ ಆಸೆ ಇತ್ತೇನೋ. ಆದರೆ ಈ ರೀತಿ ಅನಾಹುತ ಆಗೋಗಿದೆ. ಮುಂದೆ ಏನಾಗುತ್ತೋ ನೋಡೊಣ ಎಂದು ಸಿಪಿವೈ ಹೇಳಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವರಾಗಿ ಬಂದ ಕುಮಾರಸ್ವಾಮಿಗೆ ಏರ್ಪೋರ್ಟ್ ಬಳಿ ಅದ್ದೂರಿ ಸ್ವಾಗತ

ಇದೇ ವೇಳೆ ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಜಾಮೀನು ರಹಿತ ವಾರೆಂಟ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದು ಕಾಂಗ್ರೆಸ್ ನವರ ದ್ವೇಷದ ರಾಜಕಾರಣ. ಯಡಿಯೂರಪ್ಪರನ್ನು ಅನವಶ್ಯಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಏನಾಗುತ್ತೋ ನೋಡೋಣ, ಅವರು ಸಹ ಕಾನೂನು ಹೋರಾಟ ಮಾಡ್ತಿದ್ದಾರೆ. ಅವರಿಗೆ ಏನು ತೊಂದರೆ ಆಗೋದಿಲ್ಲ ಅಂದುಕೊಳ್ಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕೋಳಿ ಎಸೆದಂತೆ ಎಸೆದು ಟ್ರಕ್‌ಗೆ ಗುದ್ದಿ, ಸಿಕ್ಕ ಸಿಕ್ಕ ವಸ್ತುಗಳಲ್ಲಿ ಹೊಡೆದು ಹತ್ಯೆ

Share This Article