ಹುಬ್ಬಳ್ಳಿ/ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna By Election) ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಸಿ.ಪಿ ಯೋಗೇಶ್ವರ್ ಅವರಿಂದು ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಸಂಜೆ ನಾಲ್ಕು ಗಂಟೆ ಸುಮಾರಿಗೆ ಹುಬ್ಬಳ್ಳಿಗೆ (Hubballi) ತೆರಳಿದ ಯೋಗೇಶ್ವರ್, ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಯೋಗೇಶ್ವರ್ ಗುಡ್‌ಬೈ – ಕಾಂಗ್ರೆಸ್‌ನಿಂದ ಕೊನೆ ಕ್ಷಣದ ಕಸರತ್ತು ಆರಂಭ
Advertisement
Advertisement
ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಸಿಪಿವೈ ನಿರ್ಧರಿಸಿದ್ದರು. ಕೊನೇ ಕ್ಷಣದವರೆಗೂ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಿಪಿವೈಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಹಾಗಾಗಿ ವಿಧಾನ ಪರಿಷತ್ ಸದಸ್ಯತ್ವಕ್ಕೆ (MLC) ರಾಜೀನಾಮೆ ನೀಡಿದ್ದಾರೆ.
Advertisement
ಈ ನಡುವೆ ಫುಲ್ ಅಲರ್ಟ್ ಆಗಿರುವ ಕಾಂಗ್ರೆಸ್, ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಸಿದೆ ಎಂದು ಹೇಳಲಾಗುತ್ತಿದೆ. ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾದರೆ, ಕಾಂಗ್ರೆಸ್‌ನಿಂದಲೇ ಚನ್ನಪಟ್ಟಣ ಅಖಾಡಕ್ಕೆ ಇಳಿಯುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಾಸನಾಂಬ ಉತ್ಸವಕ್ಕೆ ಕ್ಷಣಗಣನೆ – ಜಿಲ್ಲಾ ಖಜಾನೆಯಿಂದ ದೇವಾಲಯಕ್ಕೆ ಒಡವೆಗಳ ರವಾನೆ
Advertisement
ರಾಜೀನಾಮೆ ನೀಡುವುದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿ.ಪಿ ಯೋಗೇಶ್ವರ್, ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ನೀಡಿದ್ದ ಆಫರ್ ಅನ್ನು ನಾನು ತಿರಸ್ಕರಿಸಿದ್ದೇನೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದರು.