ರಾಮನಗರ: ಎಸ್.ಟಿ ಸೋಮಶೇಖರ್ ಅವರು ಬಿಜೆಪಿಯಿಂದ (BJP) ಹೊರಹೋಗುವ ತೀರ್ಮಾನ ಮಾಡಿದ್ದರೇ ನಮ್ಮ ವಿರೋಧವಿಲ್ಲ, ಸ್ವಾಗತಿಸುತ್ತೇವೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ (CP Yogeshwara) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿಗೆ (BJP JDS Alliance) ಮಾಜಿ ಸಚಿವ ಎಸ್.ಟಿ ಸೋಮಶೇಖರ್ (ST Somashekar) ವಿರೋಧ ವ್ಯಕ್ತಪಡಿಸಿದ ವಿಚಾರ ಕುರಿತು ಚನ್ನಪಟ್ಟಣದಲ್ಲಿ ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ನಾಳೆಯಿಂದ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
Advertisement
Advertisement
ಎಸ್.ಟಿ ಸೋಮಶೇಖರ್ ಬಿಜೆಪಿಯಲ್ಲಿ ದೊಡ್ಡ ಫಲಾನುಭವಿ. ಬಿಜೆಪಿಗೆ ಬಂದಮೇಲೆ ಮಂತ್ರಿಯಾಗಿ ಪ್ರಬಲ ಖಾತೆ ಪಡೆದರು, ಅಧಿಕಾರ ಅನುಭವಿಸಿದರು. ಇವತ್ತು ಅಧಿಕಾರವಿಲ್ಲವೆಂದು ಹೀಗೆ ಮಾತನಾಡುತ್ತಾರೆ. ಡಿಕೆಶಿ (DK Shivakumar) ಜೊತೆಗಿನ ಸಂಬಂಧ ಇಟ್ಕೊಂಡು ನಮ್ಮ ಪಕ್ಷವನ್ನು ಟೀಕಿಸುತ್ತಿದ್ದಾರೆ. ಮೈತ್ರಿ ವಿಚಾರ ಚರ್ಚೆಗೂ ಮೊದಲೂ ಟೀಕೆ ಮಾಡುತ್ತಿದ್ದರು, ಈಗಲೂ ಟೀಕೆ ಮಾಡ್ತಿದ್ದಾರೆ. ಬಹುಶಃ ಅವರು ಎಂಎಲ್ಎ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಮಾಜಿ ಶಾಸಕ ಆಗಬಹುದು ಇನ್ನೇನು ಆಗಲು ಸಾಧ್ಯವಿಲ್ಲ. ಒಂದು ವೇಳೆ ಹೊರಹೋಗುವ ತೀರ್ಮಾನ ಮಾಡಿದ್ದರೆ ನಮ್ಮ ವಿರೋಧವಿಲ್ಲ, ಸ್ವಾಗತಿಸುತ್ತೇವೆ. ಅಧಿಕಾರವಿದ್ದಾಗ ಅನುಭವಿಸಿ ಈಗ ಪಕ್ಷದ ವಿರುದ್ಧ ಮಾತನಾಡುವುದು ಶೋಭೆಯಲ್ಲ ಎಂದ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: Bigg Boss Kannada 10: ದೊಡ್ಮನೆಗೆ ಕಾಲಿಡುವ ಸ್ಪರ್ಧಿಗಳು ಇವರೇ ನೋಡಿ
Advertisement
Advertisement
ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ನಮ್ಮ ನಾಯಕರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಬಹಳ ವಿರೋಧವಿದ್ದ ಕ್ಷೇತ್ರ ಚನ್ನಪಟ್ಟಣ. ನಾವು, ಕುಮಾರಸ್ವಾಮಿ ವಿರುದ್ಧ ರಾಜಕೀಯ ಮಾಡಿಕೊಂಡು ಬಂದೆವು. ಆದ್ರೆ ಹೊಂದಾಣಿಕೆ ಅನ್ನೋದು ತಾಳ್ಮೆಯಿಂದ ಪರಸ್ಪರ ಒಂದಾಗಿ ಎಲ್ಲರ ಮನಸ್ಸನ್ನು ಒಗ್ಗೂಡಿಸುವುದು. ಹಾಗಾಗಿ ಮೈತ್ರಿಯ ಅನಿವಾರ್ಯತೆ ಏನೆಂಬುದನ್ನು ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಡಲಾಗುತ್ತದೆ. ಬೂತ್ ಮಟ್ಟದಲ್ಲಿ ಎರಡೂ ಪಕ್ಷದವರನ್ನು ಒಗ್ಗೂಡಿಸಿ ಒಂದಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅರಣ್ಯ ಇಲಾಖೆ ಕಚೇರಿಯಲ್ಲಿದ್ದ 8 ಲಕ್ಷ ರೂ.ಮೌಲ್ಯದ ಶ್ರೀಗಂಧ ಕಟ್ಟಿಗೆ ಕಳ್ಳತನ!
ಇನ್ನೂ ಮೈತ್ರಿಗೆ ಕಾರ್ಯಕರ್ತರು ಒಪ್ಪುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, 100% ಮೈತ್ರಿಗೆ ನಮ್ಮ ಕಾರ್ಯಕರ್ತರು ಒಪ್ಪಿದ್ದಾರೆ. ನಮ್ಮ ಹಾಗೂ ಜೆಡಿಎಸ್‌ನ ಲಾಭವನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಕಳೆದ ಎಂಎಲ್ಎ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಲಾಭವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಆ ತಪ್ಪು ಆಗಬಾರದು. ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿ ಮಾಡಬೇಕಾಗಿದೆ. ಹಾಗಾಗಿ ಹೊಂದಾಣಿಕೆ ಅನಿವಾರ್ಯವಾಗಿದೆ. ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಎರಡು ಪಕ್ಷಗಳು ಕಾಂಗ್ರೆಸ್ ವಿರುದ್ಧವಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಸಿಪಿವೈ ತಿಳಿಸಿದ್ದಾರೆ.
Web Stories