ರಾಮನಗರ: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ (CP Yogeshwar) ಅವರ ಬಾವ ಮಹದೇವಯ್ಯ (Mahadevaiah) ಅನುಮಾನಸ್ಪದ ನಾಪತ್ತೆ ಪ್ರಕರಣ ದುರಂತ ಅಂತ್ಯ ಕಂಡಿದೆ. ಶುಕ್ರವಾರ ರಾತ್ರಿ ತೋಟದ ಮನೆಯಿಂದ ಕಾಣೆಯಾಗಿದ್ದ ಮಹದೇವಯ್ಯ ಇಂದು ತಮಿಳುನಾಡು ಗಡಿ ಭಾಗದಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ. ಕಂದಕದಲ್ಲಿ ಬಿದ್ದಿದ್ದ ಶವವನ್ನು ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮಾಜಿ ಸಚಿವ ಹಾಗೂ ಹಾಲಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ಬಾವ ಮಹಾದೇವಯ್ಯ ಚನ್ನಪಟ್ಟಣದ (Channapatna) ವಡ್ಡರದೊಡ್ಡಿಯ ತೋಟದ ಮನೆಯಿಂದ ಶುಕ್ರವಾರ ತಡರಾತ್ರಿ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದರು. ಪ್ರಕರಣದ ಸುತ್ತ ಸಾಕಷ್ಟು ಅನುಮಾನ ವ್ಯಕ್ತವಾಗಿತ್ತು. ಮಹದೇವಯ್ಯ ಅವರನ್ನು ಕಿಡ್ನ್ಯಾಪ್ (Kidnap) ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಕುಟುಂಬಸ್ಥರು ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಕಿಡ್ನ್ಯಾಪ್ ಕೇಸ್ ದಾಖಲಿಸಿದ್ದರು. ಪ್ರಕರಣ ಬೆನ್ನತ್ತಿದ ಪೊಲೀಸರಿಗೆ ಭಾನುವಾರ ಸಂಜೆ ಮಹದೇವಯ್ಯ ಅವರ ಕಾರು ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ರಾಮಾಪುರದ ಬಳಿ ಮಹದೇವಯ್ಯ ಕಾರು ಪತ್ತೆಯಾಗಿದ್ದು, ಕಾರಿನ ಹಿಂಭಾಗ ರಕ್ತದ ಕಲೆ ಇದ್ದ ಹಿನ್ನೆಲೆ ಮಹದೇವಯ್ಯ ಅವರನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಕಾರು ನಿಲ್ಲಿಸಿದ್ದ ಸುತ್ತಮುತ್ತಲಿನ ಸ್ಥಳಗಳ ಸಿಸಿಟಿವಿ ಪರಿಶೀಲಿಸಿದ ಪೊಲೀಸರು, ಕಿಡ್ನ್ಯಾಪ್ ಮಾಡಿದ್ದ ಆರೋಪಿಗಳ ಚಲನವಲನಗಳನ್ನು ಆಧರಿಸಿ ರಾಮಾಪುರ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ ಹಿನ್ನೆಲೆ ಕೊನೆಗೂ ಮಹದೇವಯ್ಯ ಅವರ ಶವ ಪತ್ತೆಯಾಗಿದೆ. ಇದನ್ನೂ ಓದಿ: ಮದುವೆಗೆ ಹೋಗಿ ಬರುತ್ತಿದ್ದವರ ಕಾರು ಅಪಘಾತ – ಇಬ್ಬರು ಸಾವು, ಐವರು ಗಂಭೀರ
Advertisement
Advertisement
ಮಹದೇವಯ್ಯ ಅವರನ್ನು ಹತ್ಯೆ ಮಾಡಿದ್ದ ಹಂತಕರು ಶವವನ್ನು ಚಾಮರಾಜನಗರ-ತಮಿಳುನಾಡು ಗಡಿ ಭಾಗದ ಅರಣ್ಯ ಪ್ರದೇಶದ ಒಳಗೆ ಬಿಸಾಕಿದ್ದರು. ಸತತ ಐದಾರು ತಾಸು ಅರಣ್ಯ ಇಲಾಖೆ ಸಿಬ್ಬಂದಿ ಜೊತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಈ ವೇಳೆ ಸ್ಥಳ ಮಹಜರ್ ನಡೆಸಿ, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದು, ಬಳಿಕ ರಾತ್ರಿ 8 ಗಂಟೆ ಸುಮಾರಿಗೆ ಅರಣ್ಯದಿಂದ ಮೃತ ದೇಹವನ್ನು ಮೇಲಕ್ಕೆ ತಂದು ಮರಣೋತ್ತರ ಪರೀಕ್ಷೆಗೆ ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಶವ ರವಾನೆ ಮಾಡಲಾಯಿತು. ಇದನ್ನೂ ಓದಿ: ಬಿಜೆಪಿ ಟೆಕೆಟ್‌ಗಾಗಿ ಕೋಟಿ ಡೀಲ್ – ಚೈತ್ರಾಗೆ ಜಾಮೀನು ಮಂಜೂರು
Advertisement
ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಹದೇವಯ್ಯ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಬೆಂಗಳೂರಿನ ಗಿರಿನಗರದಲ್ಲಿ ವಾಸವಿದ್ದ ಮಹದೇವಯ್ಯ ಬೆಂಗಳೂರಿನ (Bengaluru) ಮನೆ ರಿಪೇರಿ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಚನ್ನಪಟ್ಟಣ ತಾಲೂಕಿನ ವಡ್ಡರದೊಡ್ಡಿ ಗ್ರಾಮದ ತೋಟದ ಮನೆಯಲ್ಲಿ ವಾಸವಾಗಿದ್ದರು. ಮೆಗಾ ಸಿಟಿ ಡೆವಲಪರ್ಸ್ ನಿರ್ದೇಶಕರಾಗಿದ್ದ ಇವರು ಸಿ.ಪಿ.ಯೋಗೇಶ್ವರ್ ಅವರ ಕೆಲ ಕಂದಾಯದ ವಿಚಾರಗಳನ್ನೂ ನೋಡಿಕೊಳ್ಳುತ್ತಿದ್ದರು. ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮಿ ಆಗಿದ್ದರಿಂದ ಸಾಕಷ್ಟು ಭೂ ವಿವಾದ, ವ್ಯಾಜ್ಯಗಳು ಕೋರ್ಟ್ನಲ್ಲಿ ಇದ್ದವು ಎನ್ನಲಾಗಿದೆ. ಕೋಟ್ಯಂತರ ರೂ. ಬೆಲೆ ಬಾಳುವ ಭೂಮಿಯೊಂದರ ಪ್ರಮುಖ ದಾಖಲೆಗಳು ಮಹದೇವಯ್ಯ ಬಳಿ ಇದ್ದಿದ್ದರಿಂದ ಯಾರೋ ಸುಪಾರಿ ಕೊಟ್ಟು ಮಹದೇವಯ್ಯ ಅವರ ಕೊಲೆ ಮಾಡಿಸಿದ್ದಾರಾ ಎಂಬ ಅನುಮಾನಗಳು ಕೂಡಾ ವ್ಯಕ್ತವಾಗಿವೆ. ಇದನ್ನೂ ಓದಿ: ತನ್ನ ಪ್ರಾಣ ತ್ಯಾಗ ಮಾಡಿ ಹಲವರ ಜೀವ ಉಳಿಸಿದ ಅರ್ಜುನ – ನಡೆದಿದ್ದೇನು?
Advertisement
ಒಟ್ಟಾರೆ ರಿಯಲ್ ಎಸ್ಟೇಟ್ ಉದ್ಯಮಿ ಮಹದೇವಯ್ಯ ಅವರ ಬದುಕು ದುರಂತ ಅಂತ್ಯ ಕಂಡಿದೆ. ಅವರ ಸಾವಿಗೆ ಕಾರಣ ಏನು? ಕಿಡ್ನ್ಯಾಪ್ ಮಾಡಿ ಹತ್ಯೆಗೆ ಸುಪಾರಿ ಕೊಟ್ಟಿದ್ದು ಯಾರು ಎನ್ನುವುರ ಕುರಿತು ತನಿಖೆ ಚುರುಕುಗೊಳಿಸಿರುವ ಪೊಲೀಸರು, ಸಿಸಿಟಿವಿ ವೀಡಿಯೋ ಹಾಗೂ ಪೋನ್ ಲೊಕೇಷನ್ ಆಧಾರದ ಮೇಲೆ ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಕಾಡಾನೆ ದಾಳಿಗೆ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಬಲಿ