ತಿರುವನಂತಪುರಂ: ಕೇರಳದ ಮಾಜಿ ಆರೋಗ್ಯ ಸಚಿವೆ ಮತ್ತು ಭಾರತೀಯ ಕಮ್ಯುನಿಸ್ಟ್ ಪಾರ್ಟಿ ಮಾಕ್ರ್ಸಿಸ್ಟ್ (ಸಿಪಿಎಂ) ನಾಯಕಿ ಕೆ.ಕೆ ಶೈಲಜಾ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಸಿಪಿಎಂ ಪಕ್ಷ ಪ್ರಶಸ್ತಿಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.
Advertisement
ಶೈಲಜಾ ಕೇರಳದ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ, ನಿಫಾ ವೈರಸ್ ಮತ್ತು ಕೋವಿಡ್ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಭಾಯಿಸಿದ್ದರು. ಸಾಂಕ್ರಾಮಿಕ ರೋಗಗಳನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದ ಅವರ ನಾಯಕತ್ವಕ್ಕೆ ವಿಶ್ವಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಹಾಗಾಗಿ ಸಾರ್ವಜನಿಕ ಆರೋಗ್ಯಕ್ಕಾಗಿ ಸೇವೆ ಸಲ್ಲಿಸಿದ ಕಾರಣಕ್ಕಾಗಿ ಶೈಲಜಾ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪ್ರತಿಷ್ಠಾನದಿಂದ 64ನೇ ಮ್ಯಾಗ್ಸೆಸೆ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಇದನ್ನೂ ಓದಿ: ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ರಾರಾಜಿಸಿದ ನೂಪುರ್ ಶರ್ಮಾ ಫ್ಲೆಕ್ಸ್
Advertisement
Advertisement
2022ರ ಜುಲೈ ಕೊನೆಯ ವಾರದಲ್ಲಿ ಶೈಲಜಾಗೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪ್ರತಿಷ್ಠಾನ ಇ-ಮೇಲ್ ಮೂಲಕ ಪ್ರಶಸ್ತಿಗೆ ಆಯ್ಕೆಯಾಗಿರುವ ಬಗ್ಗೆ ತಿಳಿಸಿತ್ತು ಮತ್ತು ಪ್ರಶಸ್ತಿ ಸ್ವೀಕರಿಸುವುದಕ್ಕಾಗಿ ಅವರ ದೃಢೀಕರಣವನ್ನು ಬಯಸಿತ್ತು. ಬಳಿಕ ಈ ಬಗ್ಗೆ ಸಿಪಿಎಂನ ಕೇಂದ್ರ ಸಮಿತಿಯ ಸದಸ್ಯರಾಗಿರುವ ಶೈಲಜಾ ಪಕ್ಷದ ಹಿರಿಯರಿಗೆ ಪ್ರಶಸ್ತಿ ಬಂದಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಆ ಬಳಿಕ ಸಿಪಿಎಂ ಪ್ರಶಸ್ತಿಯನ್ನು ವಿರೋಧಿಸಿದೆ. ಹಿರಿಯ ಸಿಪಿಎಂ ನಾಯಕರ ಪ್ರಕಾರ, ಶೈಲಜಾ ಅವರು ಪಕ್ಷದಿಂದ ನಿಯೋಜಿಸಲಾದ ಕರ್ತವ್ಯವನ್ನು ಮಾತ್ರ ನಿರ್ವಹಿಸಿದ್ದಾರೆ. ಇದು ವಿಶೇಷವೇನೂ ಅಲ್ಲ ಎಂದು ಪಕ್ಷವು ಅಭಿಪ್ರಾಯಪಟ್ಟಿದೆ ಹಾಗಾಗಿ ವಿರೋಧ ವ್ಯಕ್ತಪಡಿಸಿದ್ದರು ಎಂದು ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಸರ್ಕಾರಿ ಇಲಾಖೆಯಲ್ಲಿ ಲಂಚ ಇಲ್ಲದೇ ಕೆಲಸ ನಡೆಯಲ್ಲ; ಭ್ರಷ್ಟಾಚಾರಕ್ಕೆ ಮೋದಿ ಬೆಂಬಲ – ಸಿದ್ದು ಆರೋಪ
Advertisement
ನಿಫಾ ಮತ್ತು ಕೊರೊನಾ ವಿರುದ್ಧದ ಹೋರಾಟವು ಸರ್ಕಾರ ಜಂಟಿ ಪ್ರಯತ್ನವಾಗಿದೆ ಎಂದು ಪಕ್ಷವು ನಂಬುತ್ತದೆ. ಇದು ವೈಯಕ್ತಿಕ ಪ್ರಯತ್ನವಲ್ಲ, ಆದ್ದರಿಂದ ಅವರು ಪ್ರಶಸ್ತಿಯನ್ನು ಸ್ವೀಕರಿಸಬಾರದು ಎಂಬ ಅಭಿಪ್ರಾಯ ಪಕ್ಷದ ನಾಯಕರಲ್ಲಿ ವ್ಯಕ್ತವಾಗಿತ್ತು. ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಏಷ್ಯನ್ ನೊಬೆಲ್ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ.
Live Tv
[brid partner=56869869 player=32851 video=960834 autoplay=true]