ವಿಜಯಪುರ: ಜಿಲ್ಲೆಯ ತಾಳಿಕೋಟೆ ಪಟ್ಟಣದ ಬಳಿಯ ಡೋಣಿ ನದಿ ಸೇತುವೆ ಬಿರುಕು ಬಿಟ್ಟಿದೆ. ಆದ್ದರಿಂದ ಅಧಿಕಾರಿಗಳು ಸೇತುವೆ ಮೇಲೆ ಸಂಚಾರ ಬಂದ್ ಮಾಡಿದ್ದಾರೆ.
Advertisement
ದೆಹಲಿಯಿಂದ ಇಬ್ಬರು ಎಂಜಿನಿಯರ್ ಗಳು ಇಂದು ಸ್ಥಳಕ್ಕೆ ಭೇಟಿ ನೀಡಲಿದ್ದು, ಅವರಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ದೆಹಲಿ ಜೊತೆಗೆ ಬೆಂಗಳೂರಿನಿಂದ ಹಿರಿಯ ಅಧಿಕಾರಿಗಳ ಆಗಮನಕ್ಕೆ ಸ್ಥಳಿಯ ಅಧಿಕಾರಿಗಳು ಕಾಯುತ್ತಿದ್ದಾರೆ. ಎಂಜಿನಿಯರ್ ಗಳು ಆಗಮಿಸಿ ಪರಿಶೀಲನೆ ನಡೆಸಿದ ಬಳಿಕ ಸೇತುವೆ ಯಾವ ಸ್ಥಿತಿಯಲ್ಲಿದೆ ಎನ್ನುವ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ. ಇದನ್ನೂ ಓದಿ: ದಸರಾ ಬಳಿಕ ಪ್ರಾಥಮಿಕ ಶಾಲೆ ಓಪನ್?
Advertisement
ಹಿರಿಯ ಅಧಿಕಾರಿಗಳ ಪರಿಶೀಲನೆ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಮಾಡಲು ತೀರ್ಮಾನಿಸಲಾಗಿದೆ. ಸದ್ಯ ಸೇತುವೆ ಪಕ್ಕದಲ್ಲಿರುವ ಹಳೆಯ ಸೇತುವೆ ಮೇಲೆ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ. ಹಳೆಯ ಸೇತುವೆ ಮೇಲೆ ಸಂಚಾರಕ್ಕೆ ಅನುವು ಆಗುವಂತೆ ರಸ್ತೆ ದುರಸ್ತಿ ಕಾರ್ಯವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ.
Advertisement
Advertisement
ಹಳೆಯ ಸೇತುವೆ ಗಟ್ಟಿಮುಟ್ಟಾಗಿದ್ದು, ಯಾವುದೇ ಅಪಾಯವಿಲ್ಲ. ಡೋಣಿ ನದಿಗೆ ಹೆಚ್ಚಿನ ನೀರು ಬರದಿದ್ದರೆ ಇಲ್ಲಿ ಸಂಚಾರ ಮಾಡಬಹುದು. ಸದ್ಯ ನೀರು ಕಡಿಮೆ ಆಗಿರುವ ಕಾರಣ ಹಳೆ ಸೇತುವೆ ಮೇಲೆ ಸಂಚಾರಕ್ಕೆ ತೊಂದರೆ ಇಲ್ಲ. ಈ ಕಾರಣ ಎರಡು ದಿನಗಳಲ್ಲಿ ಹಳೆಯ ಸೇತುವೆ ಮೇಲೆ ಸಂಚಾರಕ್ಕೆ ಅವಕಾಶ ಮಾಡಿ ಕೊಡಲು ಅಧಿಕಾರಿಗಳು ಸಿದ್ಧತೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಭಾರತ ಕೋವಿಡ್ 19 ನಿರ್ವಹಣೆ ಮಾಡಿದಂತೆ ಬೇರೆ ಯಾವ ದೇಶ ಮಾಡಿಲ್ಲ – ಸುಪ್ರೀಂ ಮೆಚ್ಚುಗೆ