ಬೆಂಗಳೂರು: ಕ್ರೇನ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಾಷ್ಟ್ರೀಯ ಹೆದ್ದಾರಿಗೆ ಕಂಬ ಮುರಿದು ಬಿದ್ದಿರುವ ಘಟನೆ ರಾಜಧಾನಿಯ ನೆಲಮಂಗಲ ಸಮೀಪದ ಜಾಸ್ ಟೋಲ್ ಬಳಿ ನಡೆದಿದೆ.
ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ರೇನ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇದರಿಂದ ವಿದ್ಯುತ್ ಕಂಬ ಮುರಿದು ರಸ್ತೆ ಮೇಲೆ ಬಿದ್ದಿದೆ. ಈ ಅಪಘಾತವಾದ ಕಾರಣ ತುಮಕೂರು ಬೆಂಗಳೂರು ಹೆದ್ದಾರಿಯಲ್ಲಿ ಎರಡು ಕಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಅಲ್ಲದೆ ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿ ಬಾರದ ಕಾರಣಕ್ಕೆ ವಿದ್ಯುತ್ ಕಂಬ ರಸ್ತೆಯ ಮೇಲೆ ಇದ್ದು ವಿದ್ಯುತ್ ತಂತಿಗಳು ಹೆದ್ದಾರಿಯಲ್ಲೇ ಕೈಗೆಟಕುವ ರೀತಿ ಜೋತುಬಿದ್ದಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.
Advertisement
Advertisement
ಹೆದ್ದಾರಿಯ ಎರಡೂ ಭಾಗದಲ್ಲಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಸದ್ಯ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದು, ಬೆಸ್ಕಾಂ ಸಿಬ್ಬಂದಿ ಬಾರದ ಕಾರಣ ವಾಹನ ಸವಾರರೇ ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬವನ್ನು ತೆರವುಗೊಳಿಸಿದ್ದಾರೆ. ಆದ್ರೆ ಸ್ಥಳಕ್ಕೆ ಬಾರದ ಬೆಸ್ಕಾಂ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv