ಚಿಕ್ಕಬಳ್ಳಾಪುರ: ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಕ್ರೇನ್ ವಾಹನ ಹರಿದ ಪರಿಣಾಮ ಕಾಲು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.
ನಗರದ ಬಿಬಿ ರಸ್ತೆಯ ಬಾಲಾಜಿ ಚಿತ್ರಮಂದಿರದ ಬಳಿ ಘಟನೆ ನಡೆದಿದ್ದು, ಹೊನ್ನಗಿರಿಯಪ್ಪನಹಳ್ಳಿಯ 60 ವರ್ಷದ ವೃದ್ಧ ಕಾಲು ಕಳೆದುಕೊಳ್ಳುವಂತಾಗಿದೆ. ಗಂಭೀರವಾಗಿ ಗಾಯಗೊಂಡಿರುವ ವೃದ್ಧನನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
Advertisement
ಅಪಘಾತ ನಂತರ ಕ್ರೇನ್ ವಾಹನ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಗಿದ್ದು, ರೊಚ್ಚಿಗೆದ್ದ ಜನ ಕ್ರೇನ್ ವಾಹನದ ಗಾಜು ಪುಡಿ ಮಾಡಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv