ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಒಲಿದು ಬಂದಿದೆ.
ಸಿಎಂಆರ್ ಯೂನಿವರ್ಸಿಟಿ ರವಿಚಂದ್ರನ್‍ವರಿಗೆ ಡಾಕ್ಟರೇಟ್ ಘೋಷಿಸಿದೆ. ನವೆಂಬರ್ 3ರಂದು ನಡೆಯುವ ದೊಡ್ಡ ಕಾರ್ಯಕ್ರಮದಲ್ಲಿ ಸಿಎಂಆರ್ ವಿಶ್ವವಿದ್ಯಾಲಯ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ಎಲ್ಲ ತಯಾರಿ ಮಾಡಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
ಈ ಹಿಂದೆಯೇ ಚಿತ್ರರಂಗದಲ್ಲಿ ರವಿಚಂದ್ರನ್ ಅವರು ಮಾಡಿದ ಸೇವೆಗೆ ಗೌರವ ಡಾಕ್ಟರೇಟ್ ನೀಡಬೇಕು ಎಂದು ಅಭಿಮಾನಿಗಳು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದರು. ತಮ್ಮ ಬಹುದಿನದ ಆಸೆ ಈಡೇರಿತ್ತಿರುವುದರಿಂದ ಅಭಿಮಾನಿಗಳು ಖುಷಿಯಾಗಿದ್ದಾರೆ.
Advertisement
Advertisement
ಸ್ಯಾಂಡಲ್‍ವುಡ್‍ನಲ್ಲಿ ರವಿಚಂದ್ರನ್ ಅವರು ನಟ, ನಿರ್ದೇಶಕ, ನಿರ್ಮಾಪಕ, ಗೀತಾ ರಚನೆ, ಸಂಗೀತ, ಸಂಭಾಷಣೆ ಸೇರಿದಂತೆ ಹಲವು ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ 85ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕ ನಟರಾಗಿ ಅಭಿನಯಿಸಿದ್ದಾರೆ.
Advertisement
ಭಾರತೀಯ ಚಿತ್ರರಂಗದಲ್ಲಿ ವರನಟ ರಾಜ್‍ಕುಮಾರ್ ಅವರು ಮೊದಲು ಡಾಕ್ಟರೇಟ್ ಪದವಿಯನ್ನು ಪಡೆದಿದ್ದು, ಆ ಬಳಿಕ ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್ ಸೇರಿದಂತೆ ಹಲವರು ಗೌರವ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಸದ್ಯ ಈ ಸಾಲಿಗೆ ಈಗ ರವಿಚಂದ್ರನ್ ಅವರು ಕೂಡ ಸೇರ್ಪಡೆಯಾಗಿದ್ದಾರೆ.