ಬೆಂಗಳೂರು: ಪದತ್ಯಾಗದ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ (CM Siddaramaiah) 3 ವರ್ಷದ ಸಾಧನೆಯನ್ನು ಮೆಲುಕು ಹಾಕಿದ್ದಾರೆ. ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದ ಹಿನ್ನೆಲೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: 10 ಲಕ್ಷ ಹಣ, ಸ್ಕಾರ್ಪಿಯೋ ಕಾರಿಗಾಗಿ ಕಿರುಕುಳ – ಮದುವೆಯಾದ 6 ತಿಂಗಳಲ್ಲೇ ಗೃಹಿಣಿ ಆತ್ಮಹತ್ಯೆ
ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಠಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಬೋಟ್‌ನಲ್ಲಿ ನಿಂತು ದೂರದ ದ್ವೀಪ ನೋಡ್ತಿರೋ ದರ್ಶನ್ – ಇನ್‌ಸ್ಟಾದಲ್ಲಿ ವಿಜಯಲಕ್ಷ್ಮಿ ಸ್ಟೋರಿ ಪೋಸ್ಟ್
