ರಾಯಚೂರು: ಜಿಲ್ಲೆಯ ಮಸ್ಕಿ ಕ್ಷೇತ್ರದಲ್ಲಿ ನಿರಂತರ ಓಡಾಟ ನಡೆಸಿರುವ ಮಾಜಿ ಸಚಿವ ಶ್ರೀರಾಮುಲು (Sriramulu) ಅವರು ಹಡಗಲಿ ತಾಂಡಾದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ, ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದರು. ಯುವಕರೊಂದಿಗೆ ಕ್ರಿಕೆಟ್ ಆಡಿ ತಮ್ಮ ಬಾಲ್ಯದ ದಿನಗಳನ್ನು ಮೆಲುಕು ಹಾಕಿದರು.
ಬಳಿಕ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದರು. ಹೈಕಮಾಂಡ್ ಟಿಕೆಟ್ ನಿರ್ಧಾರ ಮಾಡುತ್ತೆ ಅಂತಷ್ಟೇ ಹೇಳಿದರು. ನಾನು ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಡಬೇಕು ಅನ್ನೋ ನಿರ್ಧಾರ ಮಾಡುತ್ತೆ. ಸಾಧಕ ಬಾಧಕಗಳನ್ನು ನೋಡಿ ಟಿಕೆಟ್ ಕೊಡುವ ನಿರ್ಧಾರವನ್ನ ಪಕ್ಷ ಮಾಡುತ್ತೆ ಎಂದರು. ಇದನ್ನೂ ಓದಿ: ಮಹಿಳೆಯರ ಒಳ ಉಡುಪು ಕಳ್ಳತನ – ಆರೋಪಿ ವಶಕ್ಕೆ
ಇನ್ನೂ ರಾಜ್ಯದ ಎರಡು ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಎರಡೂ ಅಭ್ಯರ್ಥಿಗಳು ಗೆಲ್ಲುತ್ತಾರೆ. ಹೈಕಮಾಂಡ್ ಪ್ರಥಮ ಬಾರಿಗೆ ಅಹಿಂದ ಅಭ್ಯರ್ಥಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಪಕ್ಷವನ್ನು ನೋಡಿ ಜನ ಬೇಸತ್ತಿದ್ದಾರೆ. ಯಾವುದೂ ಕೂಡ ಈ ಪಕ್ಷದಲ್ಲಿ ಸರಿಯಿಲ್ಲ ಅಂತ ಜನ ನೋಡಿದ್ದಾರೆ. ಈ ಬಾರಿ ಎರಡೂ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳನ್ನು ಜನ ಗೆಲ್ಲಿಸ್ತಾರೆ ಅಂತ ಹೇಳಿದರು.

