ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ (Hardik Pandya) ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿರೋದಾಗಿ ನಟಿ ನತಾಶಾ ಸ್ಟಾಂಕೋವಿಕ್ (Natasa Stankovic) ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಮ್ಮ ಭವಿಷ್ಯದ ದೃಷ್ಟಿಯಿಂದ ಇಬ್ಬರೂ ಬೇರೆಯಾಗುತ್ತಿದ್ದೇವೆ ಎಂದು ನಟಿ ತಿಳಿಸಿದ್ದಾರೆ. ಇದನ್ನೂ ಓದಿ:ಜಾನ್ವಿ ಕಪೂರ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲಾದ ನಟಿ
Advertisement
4 ವರ್ಷಗಳ ಕಾಲ ಜೊತೆಯಾಗಿ ಇದ್ದ ಹಾರ್ದಿಕ್ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ಜೊತೆಯಾಗಿ ಇರಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಕೊನೆಗೆ ಭಿನ್ನಾಭಿಪ್ರಾಯ ಮಿತಿ ಮೀರಿದಾಗ ನಮ್ಮ ಒಳ್ಳೆಯದಕ್ಕೆ ಬೇರೆ ಆಗಬೇಕು ಎಂದು ನಿರ್ಧಾರ ಮಾಡಿದ್ದೇವೆ. ನಾವು ಒಟ್ಟಿಗೆ ಆನಂದಿಸಿದ ಸಂತೋಷ, ಪರಸ್ಪರ ಗೌರವ ಮತ್ತು ಒಡನಾಟವನ್ನು ಗಮನದಲ್ಲಿಟ್ಟುಕೊಂಡು ಮತ್ತು ನಾವು ಕುಟುಂಬವಾಗಿ ಬೆಳೆದಿದ್ದೇವೆ. ಇದು ನಮಗೆ ಕಠಿಣ ನಿರ್ಧಾರ ಎಂದು ನತಾಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Advertisement
View this post on Instagram
Advertisement
ನಮ್ಮಿಬ್ಬರ ದಾಂಪತ್ಯಕ್ಕೆ ಸಾಕ್ಷಿಯಾಗಿದ್ದು ಅಗಸ್ತ್ಯ. ಅವನು ನಮ್ಮಿಬ್ಬರ ಜೀವನದ ಕೇಂದ್ರಬಿಂದುವಾಗಿ ಮುಂದುವರಿಯುತ್ತಾನೆ. ಅವನಿಗೆ ಎಲ್ಲಾ ರೀತಿಯಲ್ಲೂ ಬೆಂಬಲವಾಗಿ ನಾವು ನಿಲ್ಲುತ್ತೇವೆ. ಈ ಕಷ್ಟಕರ ಮತ್ತು ಸೂಕ್ಷ್ಮ ಸಮಯದಲ್ಲಿ ನಮ್ಮ ಗೌಪ್ಯತೆ ಕಾಪಾಡಲು ನಾವು ಕಳಕಳಿಯಿಂದ ವಿನಂತಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
Advertisement
ಮೇನಲ್ಲಿ ಪಾಂಡ್ಯಾ ಹೆಸರನ್ನು ನಟಿ ತಮ್ಮ ಖಾತೆಯಿಂದ ತೆಗೆದು ಹಾಕಿದ್ದರು. ಅಲ್ಲಿಂದ ಇಬ್ಬರ ಡಿವೋರ್ಸ್ ಬಗ್ಗೆ ವದಂತಿ ಹಬ್ಬಿತ್ತು. ಆದರೆ ಈಗ ಇಬ್ಬರ ಕಡೆಯಿಂದಲೂ ದಿವೋರ್ಸ್ (Divorce) ಕುರಿತು ಅಧಿಕೃತ ಘೋಷಣೆ ಆಗಿದೆ.
ಅಂದಹಾಗೆ, ನತಾಶಾ ಮತ್ತು ಹಾರ್ದಿಕ್ ಪಾಂಡ್ಯ 2020ರಲ್ಲಿ ಮೇ 31ರಂದು ವಿವಾಹವಾದರು. ಜುಲೈ 2020ರಲ್ಲಿ ತಮ್ಮ ಮೊದಲ ಮಗು ಅಗಸ್ತ್ಯನನ್ನು ಸ್ವಾಗತಿಸಿದರು. 2023ರ ಫೆಬ್ರವರಿಯಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಪದ್ಧತಿ ಪ್ರಕಾರ ಮತ್ತೊಮ್ಮೆ ಮದುವೆಯಾದರು.