ಪಾಟ್ನಾ: ಇಂದು ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium Ahemadabad) ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ (INDVsAUS) ನಡುವೆ ತೀವ್ರ ಹಣಾಹಣಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಭಾರತದ ಗೆಲುವಿಗಾಗಿ ಪೂಜೆ-ಪುನಸ್ಕಾರಗಳನ್ನು ನಡೆಸಲಾಗುತ್ತದೆ. ಅಂತೆಯೇ ಟೀಂ ಇಂಡಿಯಾದ ಎಡಗೈ ಓಪನಿಂಗ್ ಬ್ಯಾಟ್ಸ್ ಮನ್ ಹಾಗೂ ವಿಕೆಟ್ ಕೀಪರ್ ಇಶನ್ ಕಿಶನ್ ಕುಟುಂಬಸ್ಥರು ದೇವರ ಮೊರೆ ಹೋಗಿದ್ದಾರೆ.
Advertisement
ಭಾರತದ ಗೆಲುವಿಗಾಗಿ ಇಶನ್ ಕಿಶನ್ (Ishan Kishan) ಕುಟುಂಬಸ್ಥರು ಪಾಟ್ನಾದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಛತ್ ಪೂಜಾ ದಿನದಂದೇ ವಿಶ್ವಕಪ್ ಪಂದ್ಯ ನಡೆಯುತ್ತಿರುವುದು ಶುಭ ಲಕ್ಷಣವಾಗಿದೆ ಎಂದು ಕಿಶನ್ ತಾಯಿ ಸುಚಿತ್ರಾ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: 13 ವಿಶ್ವಕಪ್‍ನಲ್ಲಿ 8ನೇ ಬಾರಿ ಫೈನಲ್- 5 ಬಾರಿ ಚಾಂಪಿಯನ್ ಆಗಿರೋ ಆಸ್ಟ್ರೇಲಿಯಾ
Advertisement
Advertisement
ಟೀಂ ಇಂಡಿಯಾವು ಏಕದಿನ ವಿಶ್ವಕಪ್ 2023ರ ಪ್ರತಿಯೊಂದು ಪಂದ್ಯದಲ್ಲೂ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಫೈನಲ್‍ಗೆ ಭರ್ಜರಿಯಾಗಿ ಎಂಟ್ರಿ ಕೊಟ್ಟಿದೆ. ಇದೀಗ ಇಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಎದುರಾಳಿ ತಂಡ ಆಸ್ಟ್ರೇಲಿಯಾದ ವಿರುದ್ಧ ಸೆಣಸಾಡಲಿದೆ. ಇದನ್ನೂ ಓದಿ: ಶಮಿ ಕೈಯಲ್ಲಿ ಬೆಂಕಿ ಚೆಂಡು- ಕಾಂಗರೂಗಳ ನಿದ್ದೆಗೆಡಿಸಿರೋ ಸ್ವಿಂಗ್ ಮಾಸ್ಟರ್
Advertisement
ಒಟ್ಟಿನಲ್ಲಿ ವಿಶ್ವಕಪ್ (World Cup 2023) ಮಹಾಸಮರಕ್ಕೆ ಅಹಮದಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂ ಸಾಕ್ಷಿಯಾಗುತ್ತಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಪಂದ್ಯ ನಡೆಯಲಿದ್ದು, ಪಂದ್ಯಕ್ಕೂ ಮುನ್ನ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi), ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸೆ (Anthony Albanese), ಬಾಲಿವುಡ್ ತಾರೆಯರು, ಸಚಿನ್ ತೆಂಡೂಲ್ಕರ್ (Sachin Tendulkar) ಸೇರಿದಂತೆ ವಿಶ್ವಕಪ್ ಗೆದ್ದ ತಂಡದ ಮಾಜಿ ನಾಯಕರು ಉಪಸ್ಥಿತಿ ಇರಲಿದ್ದಾರೆ. ಇದಲ್ಲದೆ ಏರ್‍ಶೋ, ಲೇಸರ್ ಶೋ, ಸಂಗೀತ, ನೃತ್ಯ ವೈಭವ ವಿಶ್ವಕಪ್ ಫೈನಲ್ ಮ್ಯಾಚ್‍ನ ಕಿಕ್ಕನ್ನ ಹೆಚ್ಚಿಸಲಿದೆ.