ಚಿಕ್ಕಬಳ್ಳಾಪುರ: ಭಾರತೀಯ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಕೆ.ಎಲ್.ರಾಹುಲ್ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಗೆಳೆಯರೊಡನೆ ದೇವಾಲಯಕ್ಕೆ ಬಂದ ಅವರನ್ನು, ದೇವಾಲಯದ ಇಒ ನಾಗರಾಜ್, ಅಧೀಕ್ಷಕ ರಘು ಹುಚ್ಚಪ್ಪ, ಎಸ್‌ಡಿಸಿ ನಾಗರಾಜ್ ಭೇಟಿಯಾಗಿ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಿದರು. ಇದನ್ನೂ ಓದಿ: CWG 2022: ನಡಿಗೆ, ಜಾವೆಲಿನ್‌ನಲ್ಲಿ ಭಾರತಕ್ಕೆ ಕಂಚು
ಕಳೆದ ಐದು ವರ್ಷಗಳ ಹಿಂದೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದು ರಾಹುಲ್ ಪೂಜೆ ಸಲ್ಲಿಸಿದ್ದರು. ಇಂದು ಸಂಜೆ ಕೂಡ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಬಳಿಕ ಗಾಯದ ಸಮಸ್ಯೆ ಹಾಗೂ ಕೋವಿಡ್-19 ನಿಂದಾಗಿ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿರುವ ಆರಂಭಿಕ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಸದ್ಯ ಕಮ್‌ಬ್ಯಾಕ್ ಮಾಡಲು ಎದುರು ನೋಡುತ್ತಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಭಾರತ ತಂಡವನ್ನು ರಾಹುಲ್ ಮುನ್ನಡೆಸಬೇಕಿತ್ತು. ಆದರೆ ಗಂಭೀರ ಗಾಯಕ್ಕೆ ತುತ್ತಾಗಿದ್ದರಿಂದ ಅವರು ತಂಡದಿಂದ ಹೊರ ನಡೆದು ಚಿಕಿತ್ಸೆಗಾಗಿ ಜಪಾನ್‌ಗೆ ತೆರಳಿದ್ದರು. ಇನ್ನೇನು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಬೇಕು ಎನ್ನುವಷ್ಟರಲ್ಲಿ ಅವರಿಗೆ ಕೋವಿಡ್-19 ಪಾಸಿಟಿವ್ ಬಂದಿತ್ತು. ಇದನ್ನೂ ಓದಿ: CWG 2022: ಟ್ರಿಪಲ್ ಜಂಪ್‍ನಲ್ಲಿ ಡಬಲ್ ಧಮಾಕ – ಎಲ್ದೋಸ್ ಪೌಲ್‍ಗೆ ಚಿನ್ನ, ಅಬ್ದುಲ್ಲಾ ಅಬೂಬಕರ್‌ಗೆ ಬೆಳ್ಳಿ