ನವದೆಹಲಿ: ಕಳೆದ ತಿಂಗಳು ಭಾತದ ವೇಗಿ ಶ್ರೀಶಾಂತ್ ಮೇಲಿನ ನಿಷೇಧವನ್ನು ಕಡಿಮೆ ಮಾಡಿ ಬಿಸಿಸಿಐ ಸಮಿತಿ ನಿರ್ಣಯ ತೆಗೆದುಕೊಂಡಿದ್ದು ಎಲ್ಲರಿಗೂ ತಿಳಿದಿದೆ. ಸ್ಪಾಟ್ ಫಿಕ್ಸಿಂಗ್ ಆರೋಪದ ಕುರಿತು ಇತ್ತೀಚೆಗೆ ತಮ್ಮ ಮೇಲಿನ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ರೀಶಾಂತ್, ‘ನನ್ನ ಮಗುವಿನ ಮೇಲಾಣೆ ನಾನು ಆ ತಪ್ಪು ಮಾಡಿಲ್ಲ’ ಎಂದು ಭಾವುಕರಾಗಿದ್ದಾರೆ.
ನನ್ನ ತಂದೆ, ಮಗುವಿನ ಮೇಲಾಣೆ, ನಾನು ಯಾವುದೇ ರೀತಿಯ ಫಿಕ್ಸಿಂಗ್ ಮಾಡಿಲ್ಲ. ಅಂತಹ ಯೋಚನೆಯೇ ನನಗೆ ಬಂದಿಲ್ಲ. ಇಂದು ನನ್ನ ತಂದೆ, ತಾಯಿ ಅನಾರೋಗ್ಯದಿಂದ ಬಳುತ್ತಿದ್ದಾರೆ. ಕಳೆದ 5 ವರ್ಷಗಳಿಂದಲೂ ಆರೋಗ್ಯದ ಸಮಸ್ಯೆ ಎದುರಿಸುತ್ತಿದ್ದು, ಇಂದು ನಾನು ಆಡುವ ಪಂದ್ಯವನ್ನು ಅವರು ನೋಡಲು ಸಾಧ್ಯವಾಗದ ಸ್ಥಿತಿಗೆ ತಲುಪಿದ್ದಾರೆ. 100 ಕೋಟಿ ರೂ. ಕೊಟ್ಟರೂ ನಾನು ಅಂತಹ ಕೆಲಸ ಮಾಡುವುದಿಲ್ಲ ಎಂದು ಶ್ರೀಶಾಂತ್ ಹೇಳಿದ್ದಾರೆ.
Advertisement
Advertisement
ಮುಂದಿನ ವರ್ಷದ ಆಗಸ್ಟ್ ವೇಳೆಗೆ ಶ್ರೀಶಾಂತ್ ಮೇಲಿನ ನಿಷೇಧದ ಅವಧಿ ಪೂರ್ಣಗೊಳ್ಳಲಿದ್ದು, 7 ವರ್ಷದ ನಿಷೇಧದ ಅವಧಿ ಅಂತ್ಯವಾಗಲಿದೆ. ನಿಷೇಧ ತೆರವಾದ ಬಳಿಕ ಮತ್ತೆ ತಾವು ಕ್ರಿಕೆಟ್ ಆಡಬೇಕು ಎಂದು ಶ್ರೀಶಾಂತ್ ಹೇಳಿದ್ದು, ವಿಶ್ವ ಕ್ರಿಕೆಟ್‍ನಲ್ಲಿ ಹಲವು ಲೀಗ್ ಆಡುತ್ತಿದ್ದಾರೆ. ನನ್ನ ಕುಟುಂಬವನ್ನು ರಕ್ಷಣೆ ಮಾಡಿಕೊಳ್ಳಲು ನಾನು ಕ್ರಿಕೆಟ್‍ಗೆ ಕಮ್ ಬ್ಯಾಕ್ ಮಾಡಬೇಕಿದೆ ಎಂದು ಹೇಳಿದ್ದಾರೆ.