ನವದೆಹಲಿ: ಕೆಕೆಆರ್ (KKR) ತಂಡದ ಕ್ರಿಕೆಟಿಗ ನಿತೀಶ್ ರಾಣಾ (Nitish Rana)ಅವರ ಪತ್ನಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ದೆಹಲಿ ಪೊಲೀಸರು (Delhi Police) ಓರ್ವನನ್ನು ಬಂಧಿಸಿದ್ದಾರೆ.
ರಾಣಾ ಅವರ ಪತ್ನಿ ಸಾಚಿ ಮಾರ್ವಾ (Saachi Marwah) ಅವರು ದೆಹಲಿಯ ಕೀರ್ತಿ ನಗರದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯಲು ಪ್ರಾರಂಭಿಸಿದ್ದಾರೆ. ಕೃತ್ಯವನ್ನು ಮುರ್ವಾ ಅವರು ಸೆರೆಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ
Just saw Nitish Rana’s wife’s Instagram stories (Saachi Marwah). Two men hit her car and followed her and Delhi police to her to leave it since they left??? This is so unacceptable! pic.twitter.com/UMQwB92xWo
— PS ⚡️ (@Neelaasapphire) May 5, 2023
ನಾನು ಪೊಲೀಸರಿಗೆ ಫೋನ್‍ನಲ್ಲಿ ಮಾಹಿತಿ ನೀಡಿದಾಗ, ಸುರಕ್ಷಿತವಾಗಿ ಮನೆ ತಲುಪಿದ್ದೀರಾ? ಹೋಗಲಿ ಬಿಡಿ, ಮುಂದಿನ ಬಾರಿ ಇದೇ ರೀತಿ ನಡೆದರೆ ನಂಬರ್ ನೋಟ್ ಮಾಡಿಕೊಳ್ಳುವಂತೆ ಹೇಳಿದರು. ಅದಕ್ಕೆ ಪ್ರತಿಯಾಗಿ ಮಾರ್ವಾ ಅವರು ಮುಂದಿನ ಬಾರಿ ಅವರ ಫೋನ್ ನಂಬರ್‌ಗಳನ್ನು ತೆಗೆದುಕೊಳ್ಳುತ್ತೇನೆ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಆಕ್ರೋಶದಿಂದ ಬರೆದುಕೊಂಡಿದ್ದಾರೆ.
ಮಾರ್ವಾ ಅವರು ಆರ್ಕಿಟೆಕ್ಚರಲ್ ಡಿಸೈನರ್ ಆಗಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಕ್ರಿಕೆಟಿಗ ನಿತೀಶ್ ರಾಣಾ ಅವರ ಪತ್ನಿಯಾಗಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ