ಮುಂಬೈ: ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಮೃತಪಟ್ಟ (Pune Porsche Crash) ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಲಾಯಿಸಿದ 17 ವರ್ಷದ ಅಪ್ರಾಪ್ತನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕನ ತಂದೆಯನ್ನು ಮಹಾರಾಷ್ಟ್ರದ ಔರಂಗಾಬಾದ್‌ನಿಂದ ಪುಣೆ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತರಿಗೆ ಮದ್ಯ ನೀಡಿದ್ದ ಒಂದೆರಡು ಬಾರ್‌ಗಳ ಮಾಲೀಕರನ್ನೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಅಪ್ರಾಪ್ತನ ಹುಚ್ಚಾಟಕ್ಕೆ ಇಬ್ಬರು ಟೆಕ್ಕಿಗಳು ಬಲಿ – ಅಪಘಾತದ ಬಗ್ಗೆ ಪ್ರಬಂಧ ಬರೆಯುವಂತೆ ಸೂಚಿಸಿದ ಕೋರ್ಟ್
ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ ನಡೆದಿದೆ. ಅಪ್ರಾಪ್ತ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ, ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆಯಿತು. ಅಪಘಾತದಲ್ಲಿ ಅನಿಸ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟಾ ಸಾವನ್ನಪ್ಪಿದರು. ಅಪಘಾತವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಿರಿದಾದ ಲೇನ್‌ನಲ್ಲಿ ಅಂದಾಜು 200 ಕಿಮೀ ವೇಗದಲ್ಲಿ ಕಾರು ಚಲಾಯಿಸಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೀಗ ಪ್ರಕರಣವನ್ನು ಪುಣೆ ಪೊಲೀಸರ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಪುಣೆ ಪೊಲೀಸರು ಬಾಲಕನ ತಂದೆಯ ವಿರುದ್ಧ ಬಾಲಾಪರಾಧ ನ್ಯಾಯ ಕಾಯ್ದೆಯ ಸೆಕ್ಷನ್ 75 ಮತ್ತು 77 ರ ಅಡಿಯಲ್ಲಿ ಆರೋಪ ಹೊರಿಸಿದ್ದಾರೆ. ಇದನ್ನೂ ಓದಿ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ
ಐಟಿ ಇಂಜಿನಿಯರ್‌ಗಳಾದ ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟ ಇಬ್ಬರೂ ರಾತ್ರಿ 2:15 ರ ಸುಮಾರಿಗೆ ಗೆಟ್ ಟುಗೆದರ್ ಮುಗಿಸಿ ಹಿಂತಿರುಗುತ್ತಿದ್ದಾಗ ವೇಗವಾಗಿ ಬಂದ ಪೋರ್ಷೆ ಅವರ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.