ಬೆಂಗಳೂರು: 29ನೇ ಮಹಡಿಯಿಂದ ಬಿದ್ದು 12ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಗೂರು ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.
ಬಾಲಕಿ ಅಪಾರ್ಟ್ಮೆಂಟ್ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ಸಾಫ್ಟ್ವೇರ್ ಎಂಜಿನಿಯರ್, ತಾಯಿ ಗೃಹಿಣಿಯಾಗಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: 3 ದಿನ ಲಾಡ್ಜ್ನಲ್ಲಿಟ್ಟು ಚಿತ್ರಹಿಂಸೆ ಕೊಟ್ಟ ಆರೋಪ- ಕಾಟನ್ಪೇಟೆ ಪೊಲೀಸರ ವಿರುದ್ಧ ವ್ಯಕ್ತಿ ದೂರು
Advertisement
ಬಾಲಕಿ ಮಂಗಳವಾರ ರಾತ್ರಿ ಮಲಗಿದ್ದ ವೇಳೆ, ಇದ್ದಕ್ಕಿದ್ದಂತೆ ಮುಂಜಾನೆ 4:30ಕ್ಕೆ ಎದ್ದು ಹಾಲ್ಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಆಕೆಯ ತಾಯಿ ವಿಚಾರಿಸಿದಾಗ, ಸರಿಯಾಗಿ ಉತ್ತರಿಸದೆ ಮತ್ತೆ ಮಲಗುವುದಾಗಿ ರೂಮಿಗೆ ತೆರಳಿದ್ದಳು. ಸುಮಾರು 5 ಗಂಟೆ ವೇಳೆಗೆ ಬಾಲಕಿ ಅಪಾರ್ಟ್ಮೆಂಟ್ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
Advertisement
Advertisement
ಜೋರಾದ ಶಬ್ದ ಕೇಳಿ ಸೆಕ್ಯೂರಿಟಿ ಹೊರಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೋಷಕರಿಗೆ ಹಾಗೂ ಅಪಾರ್ಟ್ಮೆಂಟ್ ಅಸೋಸಿಯೇಷನ್ಗೆ ಸೆಕ್ಯೂರಿಟಿ ಮಾಹಿತಿ ನೀಡಿದ್ದರು.
Advertisement
ಈ ಸಂಬಂಧ ಹುಳಿಮಾವು (Hulimavu) ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬಾಲಕ ರಾಮನ ಕಣ್ತುಂಬಿಕೊಳ್ಳಲು 2ನೇ ದಿನವೂ ಸೇರಿದ ಲಕ್ಷಾಂತರ ಭಕ್ತರು- ದೇಗುಲದಲ್ಲಿ ಹೈ ಸೆಕ್ಯೂರಿಟಿ